ತುಂಬೆ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ
ಬಂಟ್ವಾಳ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತುಂಬೆ ಪದವಿ ಪೂರ್ವ ಕಾಲೇಜಿಗೆ ಒಟ್ಟು 93 ಶೇಕಡದೊಂದಿಗೆ ಉತ್ತಮ ಫಲಿತಾಂಶ ಬಂದಿರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.ವಿಜ್ಞಾನ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 66 ವಿದ್ಯಾರ್ಥಿಗಳು ಉತ್ತೀರ್ಣರಾಗಿ,ಮೊಹಮ್ಮದ್ ಸಿನಾನ್ 568 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದರೆ,ವಾಣಿಜ್ಯ ವಿಭಾಗದಲ್ಲಿ 68 ಮಂದಿ ಹಾಜರಾಗಿ 63 ವಿದ್ಯಾರ್ಥಿಗಳು ತೇರ್ಗಡೆಯಾಗಿ ವಿದ್ಯಾರ್ಥಿನಿ ಕು.ನಮ್ರತಾ

547 ಅಂಕಗಳೊಂದಿಗೆ ಪ್ರಥಮ ಹಾಗೂ ಕಲಾ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕು.ಮೆಹರುನ್ನೀಸಾ 493 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

ಕಾಲೇಜಿನ ಒಟ್ಟು ಉತ್ತಮ ಫಲಿತಾಂಶಕ್ಕಾಗಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಆಡಳಿತ ಮಂಡಳಿ ಉಪನ್ಯಾಸಕ ವೃಂದ ಹಾಗು ವಿದ್ಯಾರ್ಥಿಗಳಿಗೆ ಅಭಿನಂದಿಸಿರುತ್ತದೆ ಎಂದು ಪ್ರಾಂಶುಪಾಲರಾದ ವಿ.ಎಸ್. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
