ಬಂಟರ ಸಂಘದ ವಿಶಂತಿ: ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ) 20 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಮೇ 24 , 25 ರಂದು ನಡೆಯಲಿರುವ ಸಂಘದ “ವಿಂಶತಿ ಸಂಭ್ರಮ”ದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸಂಘದ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ, ನಿಕಟಪೂರ್ವ ಅಧ್ಯಕ್ಷರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಮಾಜಿ ಅಧ್ಯಕ್ಷರಾದ ಕಿರಣ್ ಹೆಗ್ಡೆ ಅನಂತಾಡಿ, ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ಜತೆ ಕಾರ್ಯದರ್ಶಿ ರಂಜನ್ ಕುಮಾರ್ ಶೆಟ್ಟಿ ಅರಳ, ಜತೆ ಕೋಶಾಧಿಕಾರಿ ಪ್ರತಿಭಾ ಎ. ರೈ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಯುವ ವಿಭಾಗದ ಅಧ್ಯಕ್ಷರಾದ ಶ ನಿಶಾನ್ ಆಳ್ವ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.