ಮಹಾನ್ ಪುರುಷರ ಕಾರ್ಯಕ್ರಮದಲ್ಲಿ ಜನಸಾಮಾನ್ಯರು ಪಾಲ್ಗೊಳ್ಳುವಂತಾಗಬೇಕು :ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಮಹಾನ್ ಪುರುಷರ ಅನೇಕ ಆಚರಣೆಗಳು ಸರಕಾರದ ಅದೇಶಕ್ಕೆ ಸೀಮಿತವಾಗಿರದೆ ಜನಸಾಮಾನ್ಯರು ಕೂಡ ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ತಿಳಿಸಿದರು.

ಬಂಟ್ವಾಳ ತಾಲೂಕಾಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವುಗಳ ಸಂಯುಕ್ತಾಶ್ರಯದಲ್ಲಿಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಸಾಮಾಜಿಕ, ಆರ್ಥಿಕ ಮತ್ತು ಕಾನೂನಿಗೆ ಸಂಬಂಧಿಸಿದ ದೃಷ್ಟಿಕೋನವು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣ ಮತ್ತು ರಾಷ್ಟ್ರದ ಉತ್ತಮ ಆಡಳಿತದ ದಿಕ್ಕಿನೆಡೆಗೆ ನಮಗೆ ಯಾವಾಗಲೂ ಮಾರ್ಗದರ್ಶನ ನೀಡುತ್ತದೆ ಎಂದರು.
ಪ್ರತಿಯೋರ್ವ ಮಹಾನ್ ಪುರುಷರ ಜೀವನ ಚರಿತ್ರೆಯನ್ನು ಅರಿತುಕೊಂಡು ಅವರ ಆದರ್ಶವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದ ಅವರು ಅಂಬೇಡ್ಕರ್ ಭವನದಲ್ಲಿ ಸುಸಜ್ಜಿತ ವಾಗಿ ಕಾರ್ಯಕ್ರಮ ಆಯೋಜಿಸುವ ದೆಸೆಯಲ್ಲಿ ಸೀಲಿಂಗ್ ಅಳವಡಿಸಲು ಶಾಸಕರ ನಿಧಿಯಿಂದ ಅನುದಾನ ಒದಗಿಸುವ ಭರವಸೆ ನೀಡಿದರು.
ಪುರಸಭಾ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಎಸ್.ಪೂಜಾರಿ, ತಹಶಿಲ್ದಾರ್ ಡಿ.ಅರ್ಚನಾ ಭಟ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಜಿಲ್ಲಾ ಮಟ್ಟದ ಜಾಗೃತಿ ಅಧಿಕಾರಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೇಪು ಕಲ್ಲಂಗಳ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಗುಣಶ್ರೀ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ವಿಷಯ ಮಂಡಿಸಿದರು.
ಈ ಸಂದರ್ಭ ಏರ್ಪಡಿಸಲಾಗಿದ್ದ
ವಿವಿಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ ಕುಮಾರಿ ಸ್ವಾಗತಿಸಿದರು. ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕು ಮೊದಲು ಬಿ.ಸಿ.ರೋಡಿನ ನಾರಾಯಣಗುರು ವೃತ್ತದಿಂದ
ಅಂಬೇಡ್ಕರ್ ಭವನದ ವರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ಆಕರ್ಷಕವಾದ ಜಾಥ ನಡೆಯಿತು.
ದ.ಕ.ಜಿಲ್ಲಾ ದಲಿತ್ ನಾಗರಿಕ ಹಿತರಕ್ಷಣಾ ಯುವ ವೇದಿಕೆಯ ಅಧ್ಯಕ್ಷ ಸತೀಶ್ ಅರಳ ಸಹಿತ ದಲಿತ ಮುಖಂಡರು ಉಪಸ್ಥಿತರಿದ್ದರು.