ಪೊಳಲಿ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಕೊಳದ ಬಳಿಯ ಕಾಳಿ ಸರೋವರದ ಕೆರೆಯನ್ನು ಪುನಃಚೇತನಗೊಳಿಸಿ ಬಾಗಿನ ಅರ್ಪಣೆ ಕಾರ್ಯಕ್ರಮವು ಮೇ ೦೮ ರಂದು ಗುರುವಾರ ಜರಗಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬಂಟ್ವಾಳ ಇದರ ವತಿಯಿಂದ ಸುಮಾರು ೧೦ ಲಕ್ಷ ರೂ.ವೆಚ್ಚದಲ್ಲಿ ಪುನಃಶ್ಚೇತನಗೊಂಡಿರುವ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಬೆಳಿಗ್ಗೆ ೧೧ ಗಂಟೆಗೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ| ಡಿ.ವೀರೇಂದ್ರ ಹೆಗ್ಗಡೆ ಮತ್ತುಮಾತೃಶ್ರೀ ಡಾ|ಹೇಮಾವತಿ.ವಿ.ಹೆಗ್ಗಡೆಯವರು ನೆರವೇರಿಸಲಿದ್ದಾರೆ.

ಬಾಗಿನ ಅರ್ಪಣೆಗೆ ಸಿದ್ದವಾದ ಕೆರೆ

ಕೊಳದ ಬಳಿ ಕೆರೆಯ ಪಕ್ಕ ಎಂಅರ್‌ಪಿಎಲ್ ಸಂಸ್ಥೆಯ ಸಿ.ಎಸ್ ಆರ್ ಅನುದಾನದಿಂದ ಸುಮಾರು ೬.೭೫ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯವನ್ನು ಬೆಳಿಗ್ಗೆ ೯.೩೦ಕ್ಕೆ ಎಂಅರ್‌ಪಿಎಲ್ ಸಂಸ್ಥೆಯ ಪ್ರಬಂಧಕರಾದ *ಪ್ರದೀಪ್ ಕುಮಾರ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಪುನಃಚೇತನಗೊಳ್ಳುವ ಮೊದಲ ಚಿತ್ರ

ಈ ಕಾರ್ಯಕ್ರಮದಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ ಸ್ವಾಮೀಜಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿ ಸಚಿವರಾದ ಶ್ರೀ ರಮಾನಾಥ ರೈ , ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧ ಲೋಕೇಶ್ ,ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ, ಧರ್ಮಸ್ಥಳ ಕ್ಷೇತ್ರದ ನಿರ್ದೇಶಕಿ ಶ್ರದ್ಧಾ ಅಮಿತ್‌ , ಬಂಟ್ವಾಳ ತಹಶೀಲ್ದಾರರಾದ ಅರ್ಚನಾ ಭಟ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆನಂದ್‌ಕೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಧರ್ಮಸ್ಥಳ ಇದರ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್ ಎಸ್. ,ತಾ.ಪಂ ಬಂಟ್ವಾಳ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರಾನಾಥ.ಟಿ.ಸಾಲ್ಯಾನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಅಭಿಯಂತರ ಸುಶಾನ್ ಹಾಗೂ ಕರಿಯಂಗಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸರ್ವಸದಸ್ಯರು, ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ, ದ್ಧಿ. ದ. ಲೆಕ್ಕ ಸಹಾಯಕರು ಹಾಗೂ ಸಿಬ್ಬಂದಿವರ್ಗ. ಮುಂತಾದವರು ಭಾಗವಹಿಸಲಿದ್ದಾರೆ.

By suddi9

Leave a Reply

Your email address will not be published. Required fields are marked *