ಸಿದ್ಧಕಟ್ಟೆ: ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯು ಈಚೆಗೆ ನಡೆಯಿತು.ನೂತನ ಅಧ್ಯಕ್ಷರಾಗಿ ಶಿವರಾಜ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಉಮೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಉಮೇಶ್ ಉಪ್ಪಿರ, ಜತೆ ಕಾರ್ಯದರ್ಶಿಯಾಗಿ ಸುಶ್ಮಿತಾ ಹಾಗೂ ಕೋಶಾಧಿಕಾರಿಯಾಗಿ ಮನೋಹರ ಯು ಎಸ್ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಳಿದಂತೆ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚಂದ್ರ ಪೂಜಾರಿ, ದಿವ್ಯ, ಚೇತನ್ ಆಚಾರ್ಯ, ಕಿಶೋರ್ ಮತ್ತು ಜಯರಾಜ್ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಚಂದ್ರ ಪೂಜಾರಿ, ಕಾಲೇಜಿನ ಪ್ರಾಂಶುಪಾಲರಾದ ಡಾ ಗಿರೀಶ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಪ್ರೊ. ಹರಿಪ್ರಸಾದ್ ಬಿ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.



