ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರಕಚೇರಿಯನ್ನು ಹೊಂದಿ ಕಾರ್ಯಾಚರಿಸುವ ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ದ 2025-2030ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ನಾಯ್ಕ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಿಯಮಿತದ ಕೇಂದ್ರ ಕಚೇರಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಹಕಾರ ಸಂಘದ ಅಧಿಕಾರಿಣಿ ಡಾ.ಜ್ಯೋತಿ ಡಿ.ಅವರು ನಡೆಸಿಕೊಟ್ಟರು.
ನಿರ್ದೇಶಕರಾದ ಚಂದ್ರಪ್ರಕಾಶ್ ಶೆಟ್ಟಿ ಪಿ.ಯೂಸ್ ಎಲ್ ರೊಡ್ರಿಗಸ್, ಬಿ.ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಮಾಯಿಲಪ್ಪ ಸಾಲಿಯಾನ್, ಸುದರ್ಶನ್ ಜೈನ್, ಅಬ್ಬಾಸ್ ಆಲಿ, ಅಲ್ಲೋನ್ಸ್ ಮಿನೇಜಸ್, ಅಮ್ಮು ಅರ್ಬಿಗುಡ್ಡೆ, ಮಂಜುಳಾ ಎಂ.ಕುಶಲ, ಕಾಂಚಲಾಕ್ಷಿ ಮಣಿನಾಲ್ಕೂರು ಅವರು ಉಪಸ್ಥಿತರಿದ್ದರು.
ನಿಯಮಿತದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬೇಬಿ ಕುಂದರ್ ಹಾಗೂಸಿಬ್ಬಂದಿಗಳು ಸಹಕರಿಸುದರು.
