ಬಂಟ್ವಾಳ : ತಾಲೂಕಿನ ಬೊಂಡಾಲ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 1.50 ಲ.ರೂ. ಅನುದಾನದ ಮಂಜುರಾತಿ ಪತ್ರವನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ ಎಚ್ ರವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ, ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಶಿವ ಲಕ್ಷ್ಮಿ, ವಿವೇಕಾನಂದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನೋದ್ ಶೆಟ್ಟಿ,ಒಕ್ಕೂಟ ಸೇವಾ ಪ್ರತಿನಿಧಿ ಸುಲೋಚನಾ, ಒಕ್ಕೂಟ ಅಧ್ಯಕ್ಷೆ ವಸಂತಿ ಗಂಗಾಧರ್, ಶಾಲಾ ಶಿಕ್ಷಕಿರಾದ ಸೌಮ್ಯ,ಲಾವಣ್ಯ ಉಪಸ್ಥಿತರಿದ್ದರು.
