ಬಂಟ್ವಾಳ: ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾಗುವ ೧೦೦ ಸರಣಿ ಉಪನ್ಯಾಸ ಕಾರ್ಯಕ್ರಮಗಳಲ್ಲಿ ಮೊದಲನೇ ಸರಣಿ ಕಾರ್ಯಕ್ರಮವು ಸಂಘದ ಮಂಗಳೂರು ವಿಭಾಗ ಮತ್ತು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಹಯೋಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು. 

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಹೆಣ್ಣು ಅಬಲೆಯಲ್ಲ, ಸಬಲೆಯಾಗಿದ್ದು, ದೇಶ ರಕ್ಷಣೆಯ ಕಾರ್ಯದಲ್ಲಿ ತೊಡಗಿದ ಅಸಂಖ್ಯ ಹೆಣ್ಣು ಮಕ್ಕಳಲ್ಲಿ ರಾಣಿ ಅಬ್ಬಕ್ಕ ಅಗ್ರಸ್ಥಾನದಲ್ಲಿ ನಿಲ್ಲುತ್ತಾಳೆ. ಅವಳು ಎಲ್ಲಾ ಹೆಣ್ಣು ಮಕ್ಕಳಿಗೂ ಆದರ್ಶಪ್ರಾಯಳು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಕುಶಲಾ, ರಾಣಿ ಅಬ್ಬಕ್ಕ ಅವರ ಸಾಧನೆ ಬಗ್ಗೆ ಮಾಹಿತಿ ನೀಡಿದರು.  

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕಿ ಕಾಜಲ್  ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ ಕೆ ಪ್ರಸ್ತಾವನೆಗೈದರು. ಸಂಘದ ಮಂಗಳೂರು ವಿಭಾಗದ ಅಧ್ಯಕ್ಷೆ ವಾಣಿ ಹಾಗೂ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

 ವಿದ್ಯಾರ್ಥಿ ಲಿಖಿತ್ ವೈಯಕ್ತಿಕ ಗೀತೆ ಹಾಡಿದನು, ವಿದ್ಯಾರ್ಥಿ ಯತೀಶ್ ಆಚಾರ್ಯ ತಬಲದಲ್ಲಿ ಸಹಕರಿಸಿದನು.  ಉಪನ್ಯಾಸಕಿ  ಸಂಧ್ಯಾಕುಮಾರಿ ಧನ್ಯವಾದ ವಂದಿಸಿದರು.  ಉಪನ್ಯಾಸಕಿ  ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *