ಬಂಟ್ವಾಳ:  ತಾಲೂಕಿನ ಸಿದ್ದಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ಹಾಗೂ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಪುಸ್ತಕ ವಿತರಣೆ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಪ್ರಕಾಶ್ ಆಚಾರ್ಯ ಅವರ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನೆರವೇರಿತು. ಬಳಿಕ ನಡೆದ ಸಭೆಯಲ್ಲಿ ಸಮಾಜದ ಸುಮಾರು ೨೦೦ ವಿದ್ಯಾರ್ಥಿಗಳಿಗೆ ಲೇಖನ ಸಾಮಾಗ್ರಿ, ಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು.
ದೇವಸ್ಥಾನದ ಗುರಿಕಾರರಾದ ಗೋಪಾಲ ಗುರಿಕಾರ , ಓಬಯ ಗುರಿಕಾರ , ಸಿದ್ದಕಟ್ಟೆ ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ದೇವಸ್ಥಾನದ ಸಮಿತಿ ಸದಸ್ಯರು, ಪೋಷಕರು, ಭಕ್ತಾದಿಗಳು ಉಪಸ್ಥಿತರಿದ್ದರು.  

By Suddi9

Leave a Reply

Your email address will not be published. Required fields are marked *