ಬಂಟ್ವಾಳ: ತಾಲೂಕಿನ ಮಣಿನಾಲ್ಕೂರುಸ.ಪ.ಪೂ ಕಾಲೇಜಿನ ಪ್ರೌಢ ವಿಭಾಗದ ಶಾಲಾ ಪ್ರಾರಂಭೋತ್ಸವವು ಸೋಮವಾರ ವಿಜೃಂಭಣೆಯಿಂದ ನಡೆಯಿತು.


ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹೂ ಸಿಹಿತಿಂಡಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಧ್ಯಕತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷರಾದ ಸುಧಾ ಎನ್ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.  ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಶೋಕ ಶೆಟ್ಟಿಯವರು  ಶುಭಹಾರೈಸಿದರು.


ಈ ಸಂದರ್ಭದಲ್ಲಿ ಸರಕಾರದಿಂದ ನೀಡಲಾದ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ  ರಾಜೇಶ ಶೆಟ್ಟಿ, ಮಣಿನಾಲ್ಕೂರು ಗ್ರಾಮಪಂಚಾಯತ್ ಸದಸ್ಯರಾದ ಜಿ. ಎಂ. ಫಾರೂಕ್,ಎಸ್ ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಸಂಸ್ಥೆಯ ಹಿರಿಯ ಶಿಕ್ಷಕರಾದ ಶ್ರೀಕಾಂತ ಎ.ಸ್ವಾಗತಿಸಿದರು. ಶಿಕ್ಷಕರಾದ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು. 

By suddi9

Leave a Reply

Your email address will not be published. Required fields are marked *