ಬಂಟ್ವಾಳ:ಬಜಪೆಯಲ್ಲಿ ಕೊಲೆಗೀಡಾದ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಅವರ  ಶೃದ್ದಾಂಜಲಿ ಸಭೆಯಲ್ಲಿ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರು ಪ್ರಚೋದನಾಕಾರಿ‌ ಭಾಷಣ ಮಾಡಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾ.ನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಮೇ.12 ರಂದು‌ನಡೆದ‌ ಶೃದ್ಧಾಂಜಲಿ‌ ಸಭೆಯಲ್ಲಿ‌ ಪ್ರಭಾಕರ ಭಟ್ ಅವರು ಮಾಡಿರುವ ಭಾಷಣ ಸಮಾಜದ ಸ್ವಾಸ್ಥ್ಯ ಕೆಡಿಸುವ ಮತ್ತು ಪ್ರಚೋದನಾತ್ಮಕವಾಗಿತ್ತು.ಪರಿಣಾಮ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವ ಕಾರಣಕ್ಕೆ ಅವರ ವಿರುದ್ದ ಜೂ.2 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

By suddi9

Leave a Reply

Your email address will not be published. Required fields are marked *