ಭರತ್ ಕುಮ್ಡೇಲುಗಾಗಿ ಮನೆಯಲ್ಲಿಪೊಲೀಸರ ಶೋಧ
ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ಮುಖಂಡ ಭರತ್ ಕುಮ್ದೇಲ್ ಮೆನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿ ತನಿಖಾ ತಂಡ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕುಮ್ಮೇಲ್ ನಲ್ಲಿರುವ ಭರತ್ ಮನೆಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆಂದು ಹೇಳಲಾಗಿದೆ.
ಮೇ 27ರಂದು ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಈ ಸಂಬಂಧ ತನಿಖಾ ತಂಡವು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಭರತ್ ಕುಮ್ಮೇಲ್ ಮನೆಯನ್ನು ಶೋಧ ನಡೆಸಿದೆ ಎಂದು ತಿಳಿದು ಬಂದಿದೆ.
ಈ ನಡುವೆ ಬಂಧಿತ ಆರೋಪಿಗಳಾದ ಅಭಿನ್ ರೈ ಮತ್ತು ತೇಜಾಕ್ಷ ಎಂಬಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಹೆಚ್ಚಿನ ವಿಚಾರಣೆಗಾಗಿ ಜೂ.9 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.



