ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಕರಿಯದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ವತಿಯಿಂದ ಜೂ. ೨೦ರಂದು ಬರೆಯುವ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಓಂಪ್ರಕಾಶ್ ಶೆಟ್ಟಿ ಮಾತನಾಡಿ, ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಸಾಮಾಜಿಕ ಸಂಘಟನೆಗಳು ಹಾಗೂ ಶಿಕ್ಷಣ ಪ್ರೇಮಿ ಸಂಘಗಳು ಶಾಲೆಗಳ ಉಳಿಯುವಿಕೆ ಗುರುತರವಾದ ಪ್ರಯತ್ನ ಮಾಡುತ್ತಿವೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲಾ ಮಕ್ಕಳು ಸಾಮಾನ್ಯ ಜ್ಞಾನದಲ್ಲಿ(ವ್ಯಾವಹಾರಿಕ ಜ್ಞಾನ) ಮುಂದೆ ಇದ್ದಾರೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರವೂ ತನ್ನ ಶಾಲಾ ಮಕ್ಕಳಿಗೆ ವಿವಿಧ ಯೋಜನೆ ಗೊತ್ತುಪಡಿಸಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳಬೇಕು. ಶಾಲಾ ಮಕ್ಕಳು ಅಗತ್ಯಕ್ಕಿಂತ ಹೆಚ್ಚು ಮೊಬೈಲ್ ಬಳಕೆ ಮಾಡಬಾರದು ಎಂದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯು ಓಂಪ್ರಕಾಶ್ ಶೆಟ್ಟಿ ಅವರನ್ನು ಗೌರವಿಸಿತು. ಗು.ವ್ಯ.ಸೇ.ಸ. ಸಂಘದ ಉಪಾಧ್ಯಕ್ಷ ಜಿ. ಎಂ. ಉದಯ ಭಟ್, ನಿರ್ದೇಶಕರಾದ ದಿನೇಶ್ ಜೆ. ಕರ್ಕೇರ, ನಳಿನಿ ಶೆಟ್ಟಿ, ಲತಾ ಆರ್. ಶೆಟ್ಟಿ, ಗುರುಪುರ ಗ್ರಾಪಂ ಸದಸ್ಯೆ ಶಶಿಕಲಾ, ಆಶಾ ಕಾರ್ಯಕರ್ತೆ ಜಯಲಕ್ಷಿö್ಮÃ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಲತಾ, ಸಹ-ಶಿಕ್ಷಕಿ, ಪೋಷಕರು, ವಿದ್ಯಾರ್ಥಿಗಳು ಇದ್ದರು. ಶಾಲಾ ಮುಖ್ಯ ಶಿಕ್ಷಕಿ ರಮಾದೇವಿ ಅವರು ಸ್ವಾಗತಿಸಿ ನಿರೂಪಿಸಿದರು.
