ಬಂಟ್ವಾಳ  :  ತಾಲೂಕಿನ ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾ ಪ್ರೌಢಶಾಲೆಗೆ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ದಾನಿಗಳು ಕೊಡಗೆಯಾಗಿ ನೀಡಲಾದ ಸಮವಸ್ತ್ರ ಮತ್ತು ಲೇಖನ ಸಾಮಾಗ್ರಿವಿತರಣೆ ಮತ್ತು ಎಸೆಸ್ಸೆಲ್ಸಿ  ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಎಲ್ಲ ವರ್ಗದ ಮಕ್ಕಳಿಗೂ ಸಮಾನ ಉನ್ನತ ಶಿಕ್ಷಣ ದೊರಕುವಂತಾಗಬೇಕು. ಸರಕಾರ ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಒದಗಿಸಿದಾಗ ಬಲಿಷ್ಠ ಸಮಾಜ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಗುರಿ ಕೇವಲ ಅಂಕ ಗಳಿಸುವುದಲ್ಲ. ಸಮಾಜ ಮುಖಿಯಾಗಿ ಜೀವನದಲ್ಲಿ ಯಶಸ್ಸು ಗಳಿಸುವಂತಾಗಬೇಕು ಎಂದು ಹೇಳಿದರು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಸತ್ಯಶಂಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣದ ಸರ್ವ ಸೌಲಭ್ಯಗಳನ್ನು ಒದಗಿಸಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
  ಪುತ್ತೂರು ಪ್ರಶಾಂತಿ ಸದ್ಭಾವನಾ ಟ್ರಸ್ಟ್ ಸಂಚಾಲಕ ಮಧುಸೂದನ ನಾಯಕ್ ಉಪನ್ಯಾಸ ನೀಡಿದರು.  
ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಣಶೇಖರ ಕೊಡಂಗೆ, ಉಳಿ ಗ್ರಾ.ಪಂ.ಅಧ್ಯಕ್ಷೆ ರೇವತಿ ಮುದಲಾಡಿ, ಉಪಾಧ್ಯಕ್ಷ ವಸಂತ ಸಾಲ್ಯಾನ್ ರಾಮನಗರ, ಪಂಚಾಯತ್ ಅಭಿವೃದ್ಧಿ ಅಽಕಾರಿ ವಿದ್ಯಾಶ್ರೀ,ಶ್ರೀ ಕ್ಷೇ.ಧ.ಗ್ರಾ.ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಉಳಿಬಲು ಸ.ಹಿ.ಪ್ರಾ.ಶಾಲಾ ಶಿಕ್ಷಕ ಅಕ್ಬರ್ ಆಲಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಕೆ.ರಾಜೇಂದ್ರ ಕಕ್ಯಪದವು,  ದೇವಸ್ಥಾನ ಜಿರ್ಣೋದ್ಧಾರ ಸಮಿತಿ ಜತೆ ಕಾರ್ಯದರ್ಶಿ ಲಕ್ಷ್ಮಣ ಭಂಡಾರಿ ಪುಣ್ಕೆದಡಿ, ಉಪಾಧ್ಯಕ್ಷ ನಾರಾಯಣ ರೈ, ಉಳಿ ಕಕ್ಯಪದವು ಸ.ಹಿ.ಪ್ರಾ.ಶಾಲಾ ಶಿಕ್ಷಕಿ ವಿಶಾಲಾಕ್ಷಿ, ಬೇಂಗಿಲ ಸ.ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕ ದಿನೇಶ್ ಗೌಡ, ಉಳಿ ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಸುರೇಶ್ ಮೈರ, ಶಾಲಾಭಿವೃದ್ಧಿ ಸಮಿತಿ ಕೋಶಾಧಿಕಾರಿ ತುಷಾರ್ ಆರ್. ಭಂಡಾರಿ, ಸ್ಥಳೀಯ  ಪ್ರಮುಖರಾದ   ಮುತ್ತಪ್ಪ ಗೌಡ, ವೀರೇಂದ್ರ ಕುಮಾರ್ ಜೈನ್, ಜಗನ್ನಾಥ ಶೆಟ್ಟಿ, ಶಾಲಾಭಿವೃದ್ಧಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ,  ಸತ್ಯ ಸಾಯಿ ಸೇವಾ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಾಚಕೆರೆ ದೇವಸ್ಥಾನದ ಧರ್ಮದರ್ಶಿ ದೇಜಪ್ಪ ಬಾಚಕೆರೆ(ದೈವಾರಾಧನೆ) ಪದ್ಮನಾಭ ಶೆಟ್ಟಿ ಮಜ್ಜಿಗುಡ್ಡೆ(ಭಜನೆ, ಸತ್ಸಂಗ) ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಗರೊಡಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್(ಧಾರ್ಮಿಕ), ಡೀಕಪ್ಪ ಗೌಡ ಕೆಳಗಿನ ಅಗಲ(ಕೃಷಿ), ಶಿವಾನಂದ ಮೈರ(ಕಂಬಳ) ಅವರಿಗೆ ಪಂಚದುರ್ಗಾ ಪ್ರಶಸ್ತಿ ಪ್ರದಾನ ಮಾಡಲಾಯಿತು.  

ಎಸ್ಸೆಸ್ಸೆಲ್ಸಿ ಸಾಧಕರಾದ ಪ್ರಶಾಂತ್, ಶರಣ್ಯಾ, ಶ್ರಾವ್ಯಾ, ಪ್ರತೀಕ್ಷಾ, ಶ್ರೇಯತ್, ಆಯಿಷತುಲ್ ನಾಝಿಮಾ, ಕುಶಿ ನಾಯ್ಕ, ಫಾತಿಮತುಲ್ ಅಜ್ಮಿಯಾ, ಸಿಂಚನಾ ಅವರನ್ನು ಅಭಿನಂದಿಸಲಾಯಿತು. ಎಲ್ಲ ವಿದ್ಯಾರ್ಥಿಗಳಿಗೆ ಲೇಖನ ಪುಸ್ತಕ, ಲೇಖನ ಸಾಮಾಗ್ರಿ, ಕೊಡೆ, ಬ್ಯಾಗ್ ಮತ್ತು ಸಮವಸ್ತ್ರ ವಿತರಿಸಲಾಯಿತು.
  ಶಾಲಾ ಸಂಚಾಲಕ ಉಳಿ ದಾಮೋದರ ನಾಯಕ್ ಸ್ವಾಗತಿಸಿ, ಪ್ರಸ್ತಾವಿಸಿದರು. ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ಯೋಗೀಶ್ ಕುಮಾರ್ ವಂದಿಸಿದರು. ಶಿಕ್ಷಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

By Suddi9

Leave a Reply

Your email address will not be published. Required fields are marked *