ಬಂಟ್ವಾಳ:ಇಲ್ಲಿನ ಸಂಗಬೆಟ್ಟು -ಕರ್ಪೆ ಮತ್ತು ಎಲಿಯನಡುಗೋಡು ಗ್ರಾಮಗಳಿಗೆ ಸಂಬಂಧಪಟ್ಟಂತೆ ಸಿದ್ಧಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ ಸಂದೀಪ್ ಶೆಟ್ಟಿ ಪೊಡುಂಬ ಇವರು ಆಯ್ಕೆಯಾಗಿದ್ದಾರೆ.

ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿ ಅಧ್ಯಕ್ಷರಾಗಿ, ಪ್ರಗತಿಪರ ಕೃಷಿಕರಾಗಿ, ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
