ಬಂಟ್ವಾಳ:ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ವಿಜಯ ಫೆರ್ನಾಂಡಿಸ್ ಮತ್ತು ಕಾರ್ಯದರ್ಶಿಯಾಗಿ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಆಯ್ಕೆಯಾಗಿದ್ದಾರೆ.

ಜು. 6ರಂದು ಸಂಜೆ ಗಂಟೆ 6.30ಕ್ಕೆ ಲೊರೆಟ್ಟೋ ಹಿಲ್ಸ್ ರೋಟರಿ ಸಭಾಂಗಣದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

