ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ, ಲಲಿತ ಕಲಾ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು. ಯಕ್ಷಗಾನ ತರಬೇತುದಾರರಾದ ಶ್ರೀವತ್ಸ ಎಸ್ ಆರ್, ವಿವಿಧ ಸಂಘಗಳನ್ನು ಉದ್ಘಾಟಿಸಿ, ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳು ಅವಶ್ಯಕವಾಗಿದೆ ಎಂದರು. ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ನೂತನ ಪಧಾಧಿಕಾರಿಗಳಿಗೆ ಶುಭ ಹಾರೈಸಿದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀದೇವಿ ಪಿ., ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ ವೀಣಾ ದೇವಾಡಿಗ, ಶಾಲಾ ನಾಯಕ ತನೀಷ್ ಆರ್ ಶೆಟ್ಟಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ಆಶ್ನ ಪಿಂಟೋ ಸ್ವಾಗತಿಸಿದರು, ಅಂಕಿತಾ ಪೈ ವಂದಿಸಿದರು , ಕು. ಝೀಬಾ ಮರಿಯಮ್ ಕಾರ್ಯಕ್ರಮವನ್ನು ನಿರೂಪಿಸಿದರು.
