ಬಂಟ್ವಾಳ : ಕವಿ, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ದಿವಂಗತ ಬಿ. ತಮ್ಮಯ ಅವರ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ವಿಜೇತರಿಗೆ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸ್ಪರ್ಧೆಯಲ್ಲಿ ದ. ಕ., ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ, ಶಿರಸಿ, ಮೈಸೂರು, ದಾವಣಗೆರೆ, ಶಿವಮೊಗ್ಗ, ತೀರ್ಥ ಹಳ್ಳಿ, ಬೆಳಗಾವಿ, ದಾರವಾಡ, ಮಡಿಕೇರಿ, ಉತ್ತರಕನ್ನಡ, ಹಾಸನ ಜಿಲ್ಲೆಗಳಿಂದ ಹಾಗೂ ಮುಂಬೈಯಿಂದ ನೂರಕ್ಕೂ ಹೆಚ್ಚು ಸಾಹಿತಿಗಳು, ಬರಹಗಾರರು ಸಣ್ಣ ಕಥೆ ಹಾಗೂ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಅತೀ ಸಣ್ಣ ಕಥೆ ವಿಭಾಗದಲ್ಲಿ ಸುಲ್ತಾನ್ ಮನ್ಸೂರು ಕುಕ್ಕಾಜೆ ಪ್ರಥಮ ಹಾಗೂ ಸ್ಮಿತಾ ಅಮೃತರಾಜ್ ಸಂಪಾಜೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ರೂಪಕಲಾ ಆಳ್ವ ಹಾಗೂ ದ್ವಿತೀಯ ಸ್ಥಾನವನ್ನು ನಳಿನಿ ಭೀಮಪ್ಪ ಧಾರವಾಡ ಪಡೆದುಕೊಂಡಿರುತ್ತಾರೆ.ಸಾಹಿತಿ,ಲೇಖಕರ ಉಪಸ್ಥಿತಿಯಲ್ಲಿ ಅತ್ಯುತ್ತಮವಾದ ಸಣ್ಣ ಕಥೆ, ಲಲಿತ ಪ್ರಬಂಧಗಳನ್ನು ಗುರುತಿಸಿ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು,ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಉಮೇಶ್ ಬಾಯಾರು, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಚೇತನ್ ಮುಂಡಾಜೆ, ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನೂತನ ಕಾರ್ಯದರ್ಶಿ ಮಧುಸೂದನ್ ಮದ್ವ ಉಪಸ್ಥಿತರಿದ್ದರು.
