ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಬಳಿಕ ಅದರ ಚಕ್ರದಡಿಗೆ ಸಿಲುಕಿ ದ್ವಿಚಕ್ರ ವಾಹನ ಸವಾರ,ಬಂಟ್ವಾಳ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಅಧಿಕಾರಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.


ಮೃತರನ್ನು ಬಂಟ್ವಾಳ ತಾಲೂಕಿನ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಚಿದಾನಂದ ಅವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಮಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಈ ಸಂದರ್ಭ ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.


ಬಿ.ಸಿ.ರೋಡು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರನ್ನು  ತಿರುಗಿಸಲು ಮುಂದಾದಾಗ ಮೇಲ್ಸ್ ತುವೆಯ ಮೇಲಿನಿಂದ ಅತೀ ವೇಗ ಹಾಗೂ ಅಜಾಗರುಕತೆಯಿಂದ ಧಾವಿಸಿ ಬಂದ ಟ್ಯಾಂಕರ್ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡರು.
ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿರುವ ಪತ್ನಿ,ತಲಾ ಓರ್ವ ಹೆಣ್ಣು ಮತ್ತು ಗಂಡು ಮಗುವನ್ನು ಅವರು ಅಗಲಿದ್ದಾರೆ.ಇವರ ಅಕಾಲಿಕ ಸಾವಿಗೆ ಶ್ರೀ .ಕ್ಷೇ.ಧ.ಗ್ರಾ.ಯೋ.ಯ ಬಂಟ್ವಾಳ ಘಟಕದ ಯೋಜನಾಧಿಕಾರಿ ಜಯಾನಂದ ಪಿ.ಸಹಿತ ಸಿಬ್ಬಂದಿ ವರ್ಗ ತೀವ್ರ ಶೋಕ ವ್ಯಕ್ತಪಡಿಸಿದೆ.
ಅಪಘಾತ ವಲಯ :
ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ಮಧ್ಯೆ ಬಿ.ಸಿ.ರೋಡಿನ ಪ್ಲೈ ಓವರ್ ಎಂಡ್ ಪಾಯಿಂಟ್ ನಲ್ಲಿ   ಅಜ್ಜಿಬೆಟ್ಟುವಿಗೆ ತೆರಳುವ ನಿಟ್ಟಿನಲ್ಲಿ  ಕ್ರಾಸ್ಸಿಂಗ್ ಗೆ  ಅವಕಾಶ ಮಾಡಿಕೊಡಲಾಗಿದೆ.
ಈ ಕ್ರಾಸಿಂಗ್ ಇತ್ತೀಚಿಗಿನ ದಿನಗಳಲ್ಲಿ‌ಅಪಘಾತ ವಲಯವಾಗಿ ಗುರುತಿಸಿದೆ.ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿ ಸಾವು-ನೋವುಗಳು ಉಂಟಾಗಿದೆ. ವಾರಕ್ಕೆ ಒಂದೆರಡಾದರೂ ಸಣ್ಣಪುಟ್ಟ ಅಪಘಾತ ನಡೆಯುತ್ತಲೇ ಇರುತ್ತದೆ.
ಎಂದು ಸ್ಥಳೀಯರು ಆರೋಪಿಸಿದ್ದು,ಈ  ಕ್ರಾಸಿಂಗ್ ಮುಚ್ಚುವಂತೆ ಒತ್ತಾಯಗಳು ಕೇಳಿಬಂದಿದೆ.
ಸೋಮವಾರ ನಡೆದ  ಅಪಘಾತದಿಂದ ದಾರುಣವಾಗಿ ಸ್ಕೂಟರ್ ಸವಾರ ಸಾವನ್ನಪ್ಪಿದ ಬಳಿಕ ಈ ಕ್ರಾಸಿಂಗ್ ನಲ್ಲಿ ಟ್ರಾಫಿಕ್ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಬೇಕೆಂಬುದು ಕೆಲವರು ಬೇಡಿಕೆಯನ್ನಿಟ್ಟಿದ್ದಾರಂತೆ.

By suddi9

Leave a Reply

Your email address will not be published. Required fields are marked *