ಬಂಟ್ವಾಳ : ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೂವರಿಗೆ ಬೀಳ್ಕೊಡುಗೆ ಸಮಾರಂಭ ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್ ಬಿ.ಸಿ.ರೋಡು  ಶಾಖೆಯ ಸಭಾಂಗಣದಲ್ಲಿ ನಡೆಯಿತು.


ಮಣಿನಾಲ್ಕೂರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಸುಧಾಕರ ಶೆಟ್ಟಿ,ಕಜೆಕಾರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಸರಸ್ವತಿ, ಇಡ್ಕಿದು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಈಶ್ವರ ನಾಯ್ಕ ಅವರನ್ನು ಸನ್ಮಾನಿಸಿ ಹೃದಯಸ್ಪರ್ಶಿಯಾಗಿ ಬೀಳ್ಕೊಡಲಾಯಿತು.


ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರಿ ಸಂಘಗಳು ಮಾಡಿರುವ ಪ್ರಾಮಾಣಿಕ ಸೇವೆ ಹಾಗೂ ಸಾಧನೆಗಳಿಗಳಿಂದಾಗಿ ಪ್ರಸಿದ್ಧಿ ಪಡೆದಿವೆ.
ಸಿಬ್ಬಂದಿಗಳ ನಗುಮೊಗದ ಸೇವೆಯ ಜೊತೆಗೆ ಪಾರದರ್ಶಕತೆಯನ್ನು ಕಾಯ್ದುಕೊಂಡು ನೀಡಿದ ಸೇವೆಯಿಂದಾಗಿ ಸಹಕಾರಿ ಸಂಘಗಳು ಜಿಲ್ಲೆಯಲ್ಲಿ  ವೇಗವಾಗಿ ‌ಬೆಳೆದಿದೆ.ನಿವೃತ್ತಿ ಎಂಬುದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದ್ದು, ಕರ್ತವ್ಯದ ವೇಳೆಯ ತಾವು ಮಾಡಿರುವ ಉತ್ತಮ ಸೇವೆ ಜನರಲ್ಲಿ ಅಚ್ಚಳಿಯದೆ ಉಳಿಯುತ್ತದೆ ಎಂದು ತಿಳಿಸಿದರು.


 ಮಂಗಳೂರು ಸಹಕಾರಿ ಸಂಘಗಳ  ಉಪನಿಬಂಧಕ ರಮೇಶ್ ಎಚ್.ಎನ್,ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಡಾ| ಜ್ಯೋತಿ,ಡಿ.ಸಿ.ಸಿ.ಬ್ಯಾಂಕ್ ‌ಬಿ.ಸಿ.ರೋಡು ಶಾಖೆಯ ಮ್ಯಾನೇಜರ್ ಗಣೇಶ ಕಾರಂತ್,  ಒಕ್ಕೂಟದ ಕಾರ್ಯದರ್ಶಿ ಅಜಯ್ ಕುಮಾರ್ ಅಜಿಲ, ಡಿ.ಸಿ.ಸಿ.ಬ್ಯಾಂಕ್ ಎ.ಜಿ.ಎಮ್.ಸುಜಾತ,ವಲಯ ಮೇಲ್ವಿಚಾರಕರಾದ ಯೋಗೀಶ್, ಕೀರ್ತಿರಾಜ್ ಉಪಸ್ಥಿತರಿದ್ದರು.


   ಒಕ್ಕೂಟದ ಅಧ್ಯಕ್ಷ ಜಯಪ್ರಕಾಶ್ ಕಾಮತ್ ಸ್ವಾಗತಿಸಿ, ಒಕ್ಕೂಟದ ಸದಸ್ಯ ಅಲ್ಬರ್ಟ್ ಡಿ.ಸೋಜ ವಂದಿಸಿದರು

By suddi9

Leave a Reply

Your email address will not be published. Required fields are marked *