Published On: Sat, Jul 5th, 2025

ಜು.19-27 ವರೆಗೆ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ ನವಾಹ

ಬಂಟ್ವಾಳ: ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ ನವಾಹ ನಡೆಯಲಿದೆ.


ಜುಲೈ 19ರಂದು ಆರಂಭಗೊಂಡು 27ರವರೆಗೆ ಈ ಸರಣಿ ಕಾರ್ಯಕ್ರಮ ನಡೆಯಲಿದ್ದು, 27ರಂದು ಸಮಾರೋಪದ ದಿನ ಕುಬಣೂರು ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸಂಜೆ 4 ಗಂಟೆಗೆ ತಾಳಮದ್ದಳೆ ನಡೆಯುತ್ತದೆ ಎಂದು ವಿಶ್ವಭಾರತಿ ಸಂಚಾಲಕ ಪ್ರಶಾಂತ್ ಹೊಳ್ಳ ತಿಳಿಸಿದ್ದಾರೆ.


ಕುಬಣೂರು ಸ್ಮರಣೆ:
ಜುಲೈ 27ರಂದು ಕರ್ಣಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ತಾಳಮದ್ದಳೆ ಹಾಗೂ ಹಿರಿಯ ಭಾಗವತ ಕೀರ್ತಿಶೇಷ ಕುಬಣೂರು ಶ್ರೀಧರ ರಾವ್ ನೆನಪು ಕಾರ್ಯಕ್ರಮ ನಡೆಯಲಿದೆ. ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ (ರಿ) ಮುಡಿಪು ವತಿಯಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜುಲೈ 27ರಂದು ಸಂಜೆ 4ರಿಂದ ಕಾರ್ಯಕ್ರಮ ನಡೆಯುವುದು.


ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ.

ಹಿರಿಯ ಅರ್ಥಧಾರಿ ಜಬ್ಬಾರ್ ಸಮೋ ಅವರು ಕೀರ್ತಿಶೇಷ ಕುಬಣೂರು ಶ್ರೀಧರ ರಾವ್ ಅವರ ಸ್ಮೃತಿಯನ್ನು ಮಾಡಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್, ಮಂಗಳೂರಿನ ಮಾಂಡವಿ ಮೋಟರ್ಸ್ ಸೇಲ್ಸ್ ಡಿಜಿಎಂ ಶಶಿಧರ ಕಾರಂತ, ಯಕ್ಷಗಾನ ಸಂಘಟಕ ಭುಜಬಲಿ ಧರ್ಮಸ್ಥಳ, ಸಜಿಪ ಶ್ರೀ ಷಣ್ಮುಖ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಯಕ್ಷಗಾನ ಮಹಾಪೋಷಕ ಅರವಿಂದ ಹೊಳ್ಳ ಬೆಂಗಳೂರು, ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಕಿನ್ಯ, ಗುರುರಾಜ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆಎಂದು ವಿಶ್ವಭಾರತಿ ಯಕ್ಷಸಂಜೀವಿನಿ ಟ್ರಸ್ಟ್ ನ ಪ್ರಶಾಂತ್ ಹೊಳ್ಳ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter