ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. 

ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥರಾದ ಭವ್ಯ ಪಿ ಆರ್ ನಿಡ್ಪಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸಿ   ಮಾತನಾಡಿ,ಸಾಮಾಜಿಕ ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು .ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಉಪಯೋಗವಾಗಿರುವ ವಿಷಯಗಳನ್ನು ಮಾತ್ರ ಸಾಮಾಜಿಕ ಜಾಲತಾಣಗಳಿಂದ ಆಯ್ಕೆ ಮಾಡಿಕೊಳ್ಳಿ ಎಂದರು. 

ಪತ್ರಿಕಾವರದಿಗಾರರಾದ ರಾಕೇಶ್ ನಾಯಕ್,ವಿಷಯ ಬರಹಗಾರರಾದ ರಮ್ಯಾ ಬೋಳಂತೂರು  , ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ  ಮಲ್ಲಿಕಾ ಶೆಟ್ಟಿ, ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಉಪ ಪ್ರಾಂಶುಪಾಲರಾದ  ದಿನೇಶ್ ಉಪಸ್ಥಿತರಿದ್ದರು.  ಉಪನ್ಯಾಸಕಿ ಜಯಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *