ಬಂಟ್ವಾಳ:  ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ಸ್ ಫಾರ್ ಎಫೆಕ್ಟಿವ್ ಮ್ಯಾನೇಜ್ಮೆಂಟ್ ಆಫ್ ಡಯಾಬಿಟಿಸ್” ಎಂಬ ವಿಷದ ಕುರಿತಾಗಿ ಬಂಟ್ವಾಳ ತಾಲೂಕಿನ ತುಂಬೆಯ ಕಾವ್ಯ. ಕೆ. ನಾಯಕ್
ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ    ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರು ತುಂಬೆಯ ರೂಪ ಮತ್ತು ಕೆ. ಕೃಷ್ಣ ನಾಯಕ್ ದಂಪತಿಯ ಪುತ್ರಿಯಾಗಿದ್ದು, ಮಂದರ್ಕೆಯ ಗಿರೀಶ್ ಎನ್. ಪೈ ಅವರ ಪತ್ನಿಯಾಗಿದ್ದಾರೆ. ಬೆಂಗಳೂರು ನಗರದ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 

By suddi9

Leave a Reply

Your email address will not be published. Required fields are marked *