ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಗೆ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ರೂ 10 ಸಾವಿರ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮತ್ತು ಸಿಬ್ಬಂದಿಗೆ ಗೌರವಧನ ಹಸ್ತಾಂತರ ಕಾರ್ಯಕ್ರಮ ಶನಿವಾರ ನಡೆಯಿತು.

ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಸದಸ್ಯರಾದ ಕೆ.ರಮೇಶ ನಾಯಕ್ ರಾಯಿ, ಸುಝಾನ ಸೋಣರ್ಾಡು, ಮುಖ್ಯಶಿಕ್ಷಕಿ ಸೌಜನ್ಯ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ಜನಾರ್ದನ ಮತ್ತಿತರರು ಇದ್ದರು.
