ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯಿಂದಸಂಭ್ರಮಾಚರಣೆ ನಡೆಸಲಾಯಿತು.


ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಜಿಲ್ಲಾ ಸಮಿತಿ ಸದಸ್ಯ ನಾರಾಯಣ ನಾಯ್ಕ್, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪುರಸಭಾ ಸದಸ್ಯೆ ಜೆಸಿಂತಾ ಡಿಸೋಜ, ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಚಿನ್‌ಕುಮಾರ್, ಕೆಎಸ್‌ಆರ್‌ಟಿಸಿ ಬಿ.ಸಿ.ರೋಡು ಡಿಪೋ ಮ್ಯಾನೇಜರ್ ಇಸ್ಮಾಯಿಲ್, ಪ್ರಮುಖರಾದ ಅಬ್ಬಾಸ್ ಆಲಿ, ಇಬ್ರಾಹಿಂ ನವಾಜ್, ಮಲ್ಲಿಕಾ ಶೆಟ್ಟಿ, ಐಡಾ ಸುರೇಶ್, ಲವಿನಾ ವಿಲ್ಮಾ ಮೊರಾಸ್, ಜೋಸ್ಮಿನ್ ಡಿಸೋಜ, ಮಂಜುಳಾ ಕುಶಲ ಮೊದಲಾದವರಿದ್ದರು.


ಇದೇ ವೇಳೆ ತಲಾ ಒರ್ವ ಬಸ್  ಚಾಲಕ,ನಿರ್ವಾಹಕನನ್ನು ಅಭಿನಂದಿಸಲಾಯಿತು.

By Suddi9

Leave a Reply

Your email address will not be published. Required fields are marked *