ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ 7 ಕೋಟಿ ಗಿಡನಾಟಿ
ಬಂಟ್ವಾಳ: ನೈಸರ್ಗಿಕ ವಿಪತ್ತಿಗೆ ಮೂಲ ಕಾರಣ ಅರಣ್ಯನಾಶ. ಜಲ,ನೆಲ,ಪ್ರಾಣಿ ಸಂಕುಲಗಳು ದೇವರ ಆಸ್ತಿ,ಅವುಗಳನ್ನು ಉಳಿಸುವುದರ ಜತೆಗೆ ಪರಿಸರ ರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿ.ಕಳೆದ ಐದು ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ದಡಿಯಲ್ಲಿ ಸುಮಾರು 7 ಕೋಟಿ ಕಾಡುಹಣ್ಣಿನ ಗಿಡಗಳನ್ನು ನೆಟ್ಟು ರಕ್ಷಣೆ ಮಾಡಲಾಗುತ್ತಿದೆ ಎಂದುಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್ ಹೇಳಿದ್ದಾರೆ.

ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ.ಟ್ರಸ್ಟ್ (ರಿ.) ಬಂಟ್ವಾಳ,ಪ್ರಗತಿ ಬಂದು ಸ್ವ- ಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ತಾಲೂಕು, ಉಪ ಅರಣ್ಯ ಇಲಾಖೆ ಬಂಟ್ವಾಳ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಂಟ್ವಾಳ ತಾಲೂಕು ಇವುಗಳ ಸಹಯೋಗದೊಂದಿಗೆ ನಡೆದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರ್ಯಬೈಲುವಿನ ಬಬ್ಬರ್ಯ ದೈವಸ್ಥಾನದ ವಠಾರದಲ್ಲಿ ಗಿಡ ನೆಟ್ಟು ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಉಪವಲಯ ಅರಣ್ಯಾಧಿಕಾರಿಕೃಷ್ಣ ನಾಯ್ಕ್ ಮಾತನಾಡಿ, ಪ್ರಪಂಚದಲ್ಲಿ ಜನ ಸಂಕುಲ ಉತ್ತಮ ರೀತಿಯಲ್ಲಿ ಬದುಕಬೇಕಾದರೆ ಶೇಕಡಾ 33 ಮರಗಿಡಗಳ ಅವಶ್ಯಕತೆ ಇದೆ ಎಂದರು.
ಈ ಸಂದರ್ಭದಲ್ಲಿ ಶೌರ್ಯ ಘಟಕ ಪ್ರತಿನಿಧಿಗಳಿಗೆ ಹಣ್ಣಿನ ಗಿಡ ವಿತರಿಸಲಾಯಿತು.
ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರೊನಾಲ್ಡ್ ಡಿಸೋಜ ಲೊರೆಟ್ಟೊ, ಸಿದ್ದಕಟ್ಟೆ ವಲಯ ಅಧ್ಯಕ್ಷ ಜಗದೀಶ್ ಕೊಯ್ಲ, ,ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ,ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಬೆಟ್ಟು, ಹರಿಶ್ಚಂದ್ರ ಶೆಟ್ಟಿ ಬಬ್ಬರ್ಯಬೈಲು, ರಾಧಾಕೃಷ್ಣ ಆಚಾರ್ಯ, ಹರ್ಷೇಂದ್ರ ಹೆಗ್ಡೆ, ಶೌರ್ಯ ಸಮಿತಿಯ ಮಾಸ್ಟರ್ ಪ್ರಕಾಶ್ ,ಕ್ಯಾಪ್ಟನ್ ಕೃಷ್ಣಪ್ಪ ನಾಯ್ಕ, ಪ್ರವೀಣ್ ಪೂಜಾರಿ, ಸದಾನಂದ ನಾವೂರ, ಶಶಿಧರ ಆಚಾರ್ಯ, ಶಾಲಿನಿ, ಶೌರ್ಯ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟೆಗಾರ,, ಕಿಶೋರ್ ಕುಮಾರ್, ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಸ್ವಾಗತಿಸಿದರು, ವಲಯ ಮೇಲ್ವಿಚಾರಕಿ ಹರಿಣಾಕ್ಷಿ ವಂದಿಸಿದರು, ತಾಲೂಕು ಕೃಷಿ ಅಧಿಕಾರಿ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.
ಕೊನೆಗೆ ಶೌರ್ಯ ತಂಡದ ಸದಸ್ಯರಿಂದ ಗಿಡ ನಾಟಿ ಮಾಡಲಾಯಿತು



