ಬಂಟ್ವಾಳ: ಸಜೀಪಮೂಡ ಸುಭಾಸ್ ನಗರ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಹಾಗೂ ಸುಭಾಷ್ ಯುವಕ ಮಂಡಲ ಇದರ ಆಶ್ರಯದಲ್ಲಿ 99ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪೂರ್ವಭಾವಿ ಸಭೆ ಸುಭಾಸ್ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸುಭಾಷ್ ಯುವಕ ಮಂಡಲ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಮಾರ್ಗದರ್ಶನ ನೀಡಿದರ. ನಂದಾವರ ವಿನಾಯಕ ಶಂಕರ ನಾರಾಯಣ ದುರ್ಗಾಂಬ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿ ಪ್ರಸಾದ್ ಪೂಂಜ, ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್, ಶಾರದಾ ಪೂಜಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ , ಮಹಿಳಾ ಸಮಿತಿ ಅಧ್ಯಕ್ಷೆ ಪುಷ್ಪಾ ರಮೇಶ್ ,ಗ್ರಾಮ ಪಂಚಾಯಿತಿ ಸದಸ್ಯ ಯೋಗೀಶ್ ಬೆಳ್ಚಡ ಮೊದಲಾದವರು ಸಲಹೆ ಸೂಚನೆ ನೀಡಿದರು.
ಮೂರು ದಿನಗಳ ಶಾರದಾ ಪೂಜೆಯ ಅಂಗವಾಗಿ ಸಾಂಸ್ಕೃತಿಕ,ಧಾರ್ಮಿಕ ಹಾಗೂ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು
