ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ
ಬಂಟ್ವಾಳ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘ ಇದರ ಬಂಟ್ವಾಳ ಘಟಕದ 8ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ. ವಿಟ್ಲ ಮಾತನಾಡಿ ಸಂಘ ಗಟ್ಟಿಯಾಗಬೇಕು, ಸಂಘಟನೆಯ ಜೊತೆ ಇದ್ದುಕೊಂಡು ಉದ್ಯಮ ಮಾಡಿದಾಗ ಸಂಘಟನೆಯೊಂದಿಗೆ ನಮಗೂ ಬಲ ಬರುತ್ತದೆ . ಸಂಘದ ಪ್ರತಿಯೊಬ್ಬ ಸದಸ್ಯರು ಸಂಘದ ಅಭಿವೃದ್ಧಿಗಾಗಿ ಸಹಕರಿಸುವಂತೆ ತಿಳಿಸಿದರು.

ಬಂಟ್ವಾಳ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಮಿಯಾನ ಮಾಲಕರ ಸಂಘವೂ ಸದೃಡವಾಗಿದ್ದು ಜಿಲ್ಲಾಧ್ಯಕ್ಷರ ಕಾರ್ಯ ವೈಖರಿ ತೃಪ್ತಿ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಶಾಮಿಯಾನ ಮಾಲಕರಾದ ಅಬ್ದುಲ್ ಕರೀಂ, ಸುರೇಶ್ ಪೂಜಾರಿ, ತಿಮ್ಮಪ್ಪ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು. ಶೈಕ್ಷಣಿಕ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಹೊಸ ಸದಸ್ಯರನ್ನು ಸಂಘಕ್ಕೆ ಸೇರಿಸಿಕೊಳ್ಳಲಾಯಿತು.ಜಿಲ್ಲಾ ಕಾರ್ಯದರ್ಶಿ ಪಿಯೂಸ್ ಮ್ಯಾಕ್ಸಿಂ ಸಿಕ್ವೇರಾ, ಜಿಲ್ಲಾ ಕೋಶಾಧಿಕಾರಿ ನಿಶಿತ್ ಪೂಜಾರಿ, ತಾಲೂಕು ಘಟಕದ ಉಪಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ಉಪಸ್ಥಿತರಿದ್ದರು.



