ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ) ಬಂಟ್ವಾಳ, ಬಂಟ್ವಾಳ ನಗರ ಪೊಲೀಸ್ ಠಾಣೆ ಹಾಗೂ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನ”ದ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಾಗಾರವು ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ   ನಡೆಯಿತು.

ಬಂಟ್ವಾಳ ಪ್ರಧಾನ ಸಿವಿಲ್  ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಮೂರ್ತಿ. ಎನ್‌ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ಪುನರ್ವಸತಿ ಮಾಡುವುದು ನಾಗರೀಕ ಸಮಾಜದ ಪ್ರತಿಯೋರ್ವರ ಕರ್ತವ್ಯವಾಗಿದ್ದು, ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಎಚ್ಚರಿಕೆಯಿಂದಿರುವಂತೆ ಕರೆ ನೀಡಿದರು.
ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯೂಸೂಫ್ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನ್ಯಾಯವಾದಿ  ಅಬ್ದುಲ್ ಜಲೀಲ್ ಎನ್ ಇವರು ಮಾನದ ಕಳ್ಳ ಸಾಗಾಣಿಕೆಯ ತಡೆ  ಕುರಿತು  ಮಾಹಿತಿ ನೀಡಿದರು
ಸಹಾಯಕ ಸರ್ಕಾರಿ ಅಭಿಯೋಜಕರಾದ
ಹರಿಣಿ ಕುಮಾರಿ. ಡಿ,  ಬಂಟ್ವಾಳ ವಕೀಲರ ಸಂಘದ ಉಪಾಧ್ಯಕ್ಷರಾದ ದಯಾನಂದ ರೈ, ಕಾರ್ಯದರ್ಶಿಕೆ.ನರೇಂದ್ರನಾಥ ಭಂಡಾರಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ ದುರ್ಗಷ್ಟ ಉಪಸ್ಥಿತರಿದ್ದರು.
ಇದೇ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಮಾನವ ಕಳ್ಳ ಸಾಗಾಣಿಕೆ ತಡೆಯ ಪ್ರತಿಜ್ಞೆ ಬೋಧಿಸಲಾಯಿತು.
ಹಿರಿಯ ಉಪನ್ಯಾಸಕ  ದಾಮೊದರ್ ಕಾರ್ಯಕ್ರಮವನ್ನು ನಿರೂಪಿಸಿದರು,  

By Suddi9

Leave a Reply

Your email address will not be published. Required fields are marked *