ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಜ್ಞಾನದೀಪ ಹಾಗೂ  ಸುಜ್ಞಾನನಿಧಿ ಶಿಷ್ಯವೇತನ ಮಂಜುರಾತಿ  ಪತ್ರ ವಿತರಣಾ  ಕಾರ್ಯಕ್ರಮ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ನಡೆಯಿತು.


ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರ ಮಾಡದಂತ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆಯವರು ಮಾಡುವ ಮೂಲಕ ಸುಭಿಕ್ಷ ಸಮಾಜ, ದೇಶ ಕಟ್ಟುವ ಕಾರ್ಯ ತೊಡಗಿದ್ದಾರೆ, ಅವರ ದೂರದೃಷ್ಟಿಯ ಯೋಜನೆಗಳಿಗೆ ನಾವೆಲ್ಲರೂ ಸಹಕಾರ ನೀಡಬೇಕಾಗಿದ್ದು,ಇತ್ತೀಚಿನ ದಿನಗಳಲ್ಲಿ ಡಾ. ಹೆಗ್ಡೆ ಹಾಗೂ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುವವರ ವಿರುದ್ಧ ಸಮಾಜ ಸೆಟೆದು ನಿಲ್ಲಬೇಕಾಗಿದೆ ಎಂದರು.


ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಕೇಂದ್ರದ  ನಿರ್ದೇಶಕರಾದ ಮಹಾಬಲ ಕುಲಾಲ್ ಅವರು ಫಲಾನುಭವಿಗಳಿಗೆ ಜ್ಞಾನದೀಪ ಹಾಗೂ  ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ  ಪತ್ರ ವಿತರಿಸಿ ಮಾತನಾಡಿ,ಪ್ರಸ್ತಕ್ತ ಸಾಲಿನಲ್ಲಿ ರಾಜ್ಯದಲ್ಲಿ ಸುಮಾರು 1060  ಜ್ಞಾನದೀಪ ಶಿಕ್ಷಕರನ್ನು ಧರ್ಮಸ್ಥಳ ಯೋಜನೆಯ ಮೂಲಕ ಒದಗಿಸಲಾಗಿದ್ದು, ಈ ಪೈಕಿ ದ. ಕ. ಜಿಲ್ಲೆಗೆ 146 ಶಿಕ್ಷಕರನ್ನು ಆಯ್ದ ಶಾಲೆಗಳಿಗೆ ನೀಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಸಹಕಾರಿಯಾಗಿದೆ ಎಂದರು.


ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಕಕ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಬಂಟ್ವಾಳ  ಜನಜಾಗೃತಿ ವೇದಿಕೆ ಸದಸ್ಯರಾದ  ಸದಾನಂದ ನಾವುರ, ಬಂಟ್ವಾಳ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ, ಯುವ ವಾಹಿನಿ  ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹರೀಶ್ ಕುದನೆ, ಕಾಡಬೆಟ್ಟು ಶೌರ್ಯ ಘಟಕದ ಪ್ರತಿನಿಧಿ ಪ್ರವೀಣ್ ಕುಮಾರ್ ವೇದಿಕೆಯಲ್ಲಿದ್ದರು.
ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪ್ರಸ್ತಾವನೆಗೈದು, ಸ್ವಾಗತಿಸಿದರು. ತಾಲೂಕು ಯೋಜನಾಧಿಕಾರಿ ಜಯನಂದ ಪಿ ಕಾರ್ಯಕ್ರಮ ನಿರೂಪಿಸಿದರು. 

By suddi9

Leave a Reply

Your email address will not be published. Required fields are marked *