ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಶನ್ ಬಂಟ್ವಾಳ ಕ್ಷೇತ್ರ ಸಮಿತಿಯ ಮಹಾಸಭೆ, ಟೈಲರ್ ವೃತ್ತಿ ಬಾಂಧವರಿಗೆ ಸನ್ಮಾನ ಮತ್ತು ಟೈಲರ್ ಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಿ.ಸಿ.ರೋಡಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ನಾರಾಯಣ ಬಿ.ಎ. ಉದ್ಘಾಟಿಸಿದರು. ಅವರು ಮಾತನಾಡಿ ವಾರ್ಷಿಕ ಮಹಾಸಭೆ ಟೈಲರ್ ಗಳ ಹಬ್ಬವಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಎಲ್ಲರೂ ಜೊತೆಗೂಡಿ ಸಂಘಟನೆಯನ್ನು ಬಲಪಡಿಸುವುದರೊಂದಿಗೆ ನಮ್ಮ ಮುಂದಿನ ಕಾರ್ಯಯೋಜನೆಗಳನ್ನು ರೂಪಿಸಲು ಇದು ವೇದಿಕೆಯಾಗಿದೆ ಎಂದು ತಿಳಿಸಿದರು.

ಅಂಚೆ ಇಲಾಖೆಯ ಮಾರುಕಟ್ಟೆ ವಿಸ್ತರಣಾಧಿಕಾರಿ ಗುರುಪ್ರಸಾದ್ ಮಾಹಿತಿ ನೀಡಿ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡ ಬಹುತೇಕರು ಮದ್ಯಮ ವರ್ಗದವರು. ಭವಿಷ್ಯದ ಹಿತದೃಷ್ಟಿಯಿಂದ ಅಂಚೆ ಇಲಾಖೆಯಲ್ಲಿ ಕಡಿಮೆ ಪ್ರೀಮಿಯಂನ ಅಪಘಾತ ಹಾಗೂ ಆರೋಗ್ಯ ವಿಮೆಗಳಿದ್ದು ಮಾಡಿಸಿಕೊಳ್ಳುವಂತೆ ತಿಳಿಸಿದರು.
ಕೆಎಸ್‌ಟಿಎ ಬಂಟ್ವಾಳ ಕ್ಷೇತ್ರ ಸಮಿತಿಯ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ ಸದಸ್ಯರ ಸಹಕಾರದಿಂದಾಗಿ ತನ್ನ ಅಧಿಕಾರವಧಿಯಲ್ಲಿ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಹಾಗೂ ವಿವಿಧ ವಲಯಗಳ ಹಿರಿಯ ಟೈಲರ್ ಗಳನ್ನು ಗೌರವಿಸಲಾಯಿತು. ನಗರ ಸಮಿತಿಯ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಟೈಲರ್ ವೃತ್ತಿನಿರತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಪ್ರಜ್ವಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾಧ್ಯಕ್ಷೆ ವಿದ್ಯಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೋಹನ್ ಎಸ್. ಕೋಡಿ, ಉಪಾಧ್ಯಕ್ಷ ದೇಜಪ್ಪ ವಿ. ಪೂಜಾರಿ, ನಿಕಟಪೂರ್ವ ಕೋಶಾಧಿಕಾರಿ ಈಶ್ವರ್ ಕುಲಾಲ್ ಭಾಗವಹಿಸಿದ್ದರು. ವಿವಿಧ ವಲಯದ ಅಧ್ಯಕ್ಷ, ಹಾಗೂ ಪದಾಧಿಕಾರಿಗಳಾದ ಸದಾನಂದ ಫರಂಗಿಪೇಟೆ, ಇಂದಿರಾ ಬಿ.ಸಿ.ರೋಡು, ಸೀತಾರಾಮ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ದಯಾನಂದ ರಾಯಿ, ಕವಿತಾ , ರಾಜೇಂದ್ರ ಬಿ.ಸಿ. ರೋಡು, ವಾರಿಜ, ಆಶಾ ಗಿರಿಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಯಾದೇಶ್ ತುಂಬೆ ವರದಿ ವಾಚಿಸಿದರು, ಕೋಶಾಧಿಕಾರಿ ತುಳಸಿ ಲೆಕ್ಕಪತ್ರ ಮಂಡಿಸಿದರು. ಸದಸ್ಯರಾದ ವಸಂತ ಪೂಜಾರಿ ಕಲ್ಲಡ್ಕ ಹಾಗೂ ಕಸ್ತೂರಿ ಪಿ. ಶೆಟ್ಟಿ ಮಾಣಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ನೂತನ ಕ್ಷೇತ್ರ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಯಾದೇಶ್ ತುಂಬೆ, ಕಾರ್ಯದರ್ಶಿಯಾಗಿ ತುಳಸಿ ಆರ್. ಕೋಶಾಧಿಕಾರಿಯಾಗಿ ವಸಂತ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
