ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ಬಂಟ್ವಾಳ ವತಿಯಿಂದ ಬಂಟವಾಳ ತಾಲೂಕಿನ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಶ್ರೀ ಕಾರಿಂಜೇಶ್ವರ ದೇವಸ್ಥಾನದ ವಠಾರದ ಸುತ್ತ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಯಿತು.

ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಅವರು ಸ್ವಾತಂತ್ರ್ಯ ಸಂಗ್ರಾಮದ ಹೊಸ್ತಿಲಲ್ಲಿ ತಾಲೂಕಿನಲ್ಲಿ 70 ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು
ತಿಳಿಸಿದರು.
ಕಾಡಬೆಟ್ಟು ಒಕ್ಕೂಟ ಮತ್ತು ಕಾವಳಪಡೂರು ಒಕ್ಕೂಟ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕಾರಿಂಜಕ್ಷೇತ್ರದ ವ್ತವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್,ಸ್ಥಳೀಯ ಪ್ರಮುಖರಾದ
ಪ್ರಮೋದ್ ಕುಮಾರ್ ರೈ , ಚಂದ್ರಶೇಖರ್ ಶೆಟ್ಟಿ, ಪ್ರವೀಣ್ ಕಾಡಬೆಟ್ಟು,ಸೇವಾ ಪ್ರತಿನಿಧಿಗಳಾದ ರೇಖಾ ಹಾಗೂ ರಜನಿ ಹಾಗೂ ಒಕ್ಕೂಟದ ಸದಸ್ಯರು ಶೌರ್ಯ ತಂಡದ ಸದಸ್ಯರು ಭಾಗವಹಿಸಿದ್ದರು.
One attachment • Scanned by Gmail
