ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬಂಟ್ವಾಳ ಯುವ ಕಾಂಗ್ರೆಸ್ ಆಶ್ರಯದಲ್ಲಿ ಬೆಳಗಾವಿಯ ವಿಧಾನಸಭಾ ಕಲಾಪದ ಸಮಯದಲ್ಲಿ ಮಹಿಳೆಯರ ಚಿತ್ರವನ್ನು ಅಶ್ಲೀಲವಾಗಿ ವೀಕ್ಷಿಸಿದವರ ವಿರುದ್ಧ ಪ್ರತಿಭಟನೆಯನ್ನುಡಿ. 13ರಂದು ಶನಿವಾರ 9.30ಕ್ಕೆ ಬಿಸಿರೋಡ್ ತಾಲೂಕು ಕಛೇರಿಯ ಮುಂಭಾದಲ್ಲಿ ನಡೆಯಲಿದೆ.
ಕಾಂಗ್ರೆಸ್ ಪ್ರತಿಭಟನೆ

ಕಾಂಗ್ರೆಸ್ ಪಕ್ಷದ ನಾಯಕರು, ಜನಪ್ರತಿನಿಧಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ಬಾಸ್ ಆಲಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಪ್ರಕಟನೆಯಲ್ಲಿ ಸುದ್ದಿ9ಗೆ ತಿಳಿಸಿದ್ದಾರೆ .
