ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ – 2025
ಬಂಟ್ವಾಳ: ಯುವ ಪೀಳಿಗೆ ಕಾಣುವ ಕನಸುಗಳಿಗೆ ಅವರ ಭಾವನೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಿದಲ್ಲಿ ಅವರ ಸಾಧನೆ ಅದ್ಬುತವಾಗಲಿದೆ ಎಂದು ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಬ್ದುಲ್ ರಝಾಕ್ ಅಭಿಪ್ರಾಯ ಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇವರ ಸಂಯುಕ್ತ ಆಶ್ರಯದಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ – 2025 ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂದ್ಯಾಟವನ್ನು ನೋಡಲ್ ಅಧಿಕಾರಿ ಜಗದೀಶ್ ಉದ್ಘಾಟಿಸಿ ಶುಭಭಹಾರೈಸಿದರು. ವೇದಿಕೆಯಲ್ಲಿ ಕಲ್ಲಡ್ಕ ಕ್ಲಸ್ಟರ್ ಸಿ.ಆರ್.ಪಿ.ಜ್ಯೋತಿ,ಜೆಮ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಅಹ್ಮದ್ ಮುಸ್ತಫಾ, ಆಡಳಿತ ಮಂಡಳಿ ಟ್ರಸ್ಟಿ ಅಲ್ತಾಫ್ ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ ಹಮೀದ್ ಗೋಳ್ತಮಜಲು, ಜೆಮ್ ಆಂಗ್ಲ ಮಾಧ್ಯಮ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್, ಕಲ್ಲಡ್ಕ ಶ್ರಿರಾಮ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್, ಉಪಸ್ಥಿತರಿದ್ದರು.
ಜೆಮ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ನಿರಂಜನ್ ಸ್ವಾಗತಿಸಿ, ಶಿಕ್ಷಕಿಯರಾದ ಭವ್ಯ ಹಾಗೂ ಯಕ್ಷಿತ ಕಾರ್ಯಕ್ರಮ ನಿರೂಪಿಸಿದರು.ವಸಂತಿ ವಂದಿಸಿದರು.



