ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಆಡಳಿತಸೌಧ ( ತಾಲೂಕು)ಕಚೇರಿಗೆ ಬುಧವಾರಮಧ್ಯಾಹ್ನ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ,ಮಧ್ಯವರ್ತಿಯ ಮೂಲಕ ಹಣದ ವ್ಯವಹಾರದಲ್ಲಿ ತೊಡಗಿದ್ದ ಉಪತಹಶೀಲ್ದಾರ್ ಸಹಿತ ಮೂವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ
.


ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಬಂಧಿತರಾಗಿದ್ದು,ಈ ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದರ ಬಗ್ಗೆಯು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುರಿದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಸಜೀಪಮುನ್ನೂರಿನ ಪುಷ್ಪರಾಜ್ ಅವರಿಗೆ ಸೇರಿದ ಜಮೀನಿನ ಪೌತಿ ಖಾತೆ ಮಾಡಿ ಕೊಡಲು ಕೇಸ್ ವರ್ಕರ್ ಸಂತೋಷ್ 1500 ಹಾಗೂ ತಹಶೀಲ್ದಾರರಿಗೆ 20 ಸಾ.ರೂ.ಕೊಡಬೇಕೆಂದು ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಲಂಚದ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಪುಪ್ಪರಾಜ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು.ಬುಧವಾರ ಮಧ್ಯಾಹ್ನ
ಬ್ರೋಕರ್ ಗಣೇಶ್ ಅವರ ಮೂಲಕ ಹಣ ವ್ಯವಹಾರ ನಡೆಯುವ ಸಂದರ್ಭದಲ್ಲಿ ಲೋಕಾಯಕ್ತ ಪೊಲೀಸರು ದಾಳಿ ನಡೆಸಿ ಮೂವರನ್ನು ತಮ್ಮ ಬಲೆಗೆ ಕೆಡವಿ ಹಾಕುಬಲ್ಲಿ ಯಶಸ್ವಿಯಾಗಿದ್ದಾರೆ.
ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಡಿವೈಎಸ್ಪಿಗಳಾದ ಗಾನಾ ಪಿ.ಕುಮಾರ್, ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಚಂದ್ರಶೇಖರ, ಭಾರತಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
