ಬಂಟ್ವಾಳ: ವಿಶ್ವ ಗಾಣಿಗರ ಚಾವಡಿ ಮಂಗಳೂರು ೧೧ನೇ ವರ್ಷದ ಸೇವಾ ಯೋಜನೆ ಪ್ರಯುಕ್ತ ಆರೋಗ್ಯ ಸಂಜೀವಿನಿ ಯೋಜನೆಯಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಸಂಯುಕ್ತಾಶ್ರಯದಲ್ಲಿ ಆ.೧೭ರಂದು ಪಾಣೆಮಂಗಳೂರಿನ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಬೃಹತ್ ವೈದ್ಯಕೀಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಹರಿಪ್ರಸಾದ್ ಶಕ್ತಿನಗರ ತಿಳಿಸಿದರು.
ರಕ್ತ ಸಂಜೀವಿನಿ ಯೋಜನೆಯಡಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ನೇತ್ರ ಸಂಜೀವಿನಿ ಯೋಜನೆಯಡಿ ಚಿರಾವಿ ಆಪ್ಟಿಕಲ್ಸ್ ಪಾಣೆಮಂಗಳೂರು ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಮತ್ತು ಅರ್ಹರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ನಡೆಯಲಿದೆ. ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಅವರು ತಿಳಿಸಿದ್ದಾರೆ.
ನಂತರ ವಿಶ್ವ ಗಾಣಿಗರ ಚಾವಡಿ ವಾರ್ಷಿಕ ಮಹಾಸಭೆ ನಡೆಯಲಿದ್ದು, ಗೇನದ ತುಡರ್ ಯೋಜನೆಯಡಿ ಶ್ರೀನಿವಾಸ್ ಫೌಂಡೇಶನ್ ಮುಂಬೈ ಮತ್ತು ಯುಎಇ ಗಾಣಿಗ ಫ್ಯಾಮಿಲಿ ದುಬೈ ಸಂಯುಕ್ತಾಶ್ರಯದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಗೇನದತುಡರ್ ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.
