ಬಂಟ್ವಾಳ: ಯುವಜನತೆಯಲ್ಲಿ ಭಾವನೆಗಳು ಶುದ್ಧವಾಗಿದ್ದರೆ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಹಕಾರವಾಗುತ್ತದೆ. ಎಲ್ಲರೂ ಭೇದಭಾವ ಮರೆತು ಒಂದಾದಲ್ಲಿ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದು ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ಪ್ರಾಂಶುಪಾಲ ಎಂ.ಡಿ.ಮಂಚಿ ಹೇಳಿದರು.

ಕಾಲೇಜಿನ ಎನ್.ಎಸ್.ಎಸ್.ಘಟಕದಿಂದ ಆಯೋಜಿಸಿದ್ದ ‘ಸದ್ಭಾವನ ದಿನ’ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್ ವಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು.
