ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ರೈತ ಕಲ್ಯಾಣ ನಿಧಿ ಯೋಜನೆಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ತಲಾ 10 ಸಾ.ರೂ.ವಿನಂತೆ ಒಟ್ಟು 2.20 ಲಕ್ಷ ರೂ. ರೈತ ಕಲ್ಯಾಣ ನಿಧಿಯನ್ನು ವಿತರಿಸಲಾಯಿತು.

ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಅವರು ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು .


ಸಭಾಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ  ಪ್ರಭಾಕರ ಪ್ರಭು ಮಾತಾನಾಡಿ , ಬೆಳೆ ಸಾಲ ಪಡೆದು ಸಂಘದಲ್ಲಿ ವ್ಯವಹಾರ ಮಾಡುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ , ಈ ಯೋಜನೆಯಡಿ ಮೃತ ಸದಸ್ಯರ ಕುಟುಂಬಕ್ಕೆ  ಸಹಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.


ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ , ನಿರ್ದೇಶಕರಾದ ಸತೀಶ್ ಪೂಜಾರಿ , ದಿನೇಶ್ ಪೂಜಾರಿ ,ರಶ್ಮಿತ್ ಶೆಟ್ಟಿ,ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ , ವೀರಪ್ಪ ಪರವ , ವಿಶ್ವನಾಥ ಶೆಟ್ಟಿಗಾರ್ ,    ಎ.ಶಿವ ಗೌಡ , ಮಂದಾರತಿ ಎಸ್ ಶೆಟ್ಟಿ , ಪುಷ್ಪಲತಾ ಎಸ್ ಆರ್ , ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು . ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

By suddi9

Leave a Reply

Your email address will not be published. Required fields are marked *