ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಯೊಂದು ಬೆಳವಣಿಗೆಯನ್ನು ಕೂಡ ಪೋಷಕರು ಗಮನವಹಿಸಬೇಕು ಹಾಗೂ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆಯನ್ನು ತಿಳಿದುಕೊಂಡು ತಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಬೇಕು ಎಂದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ , ಪ್ರಾಚಾರ್ಯರಾದ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಶ್ವೇತ ಕಾರ್ಯಕ್ರಮ ನಿರ್ವಹಿಸಿದರು.
