ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ “ಭಾಂದವ್ಯಗಳ ಬಂಧನ ” ಎಂಬ ಶೀರ್ಷಿಕೆಯಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು.

ವಿಶೇಷ ಅಭ್ಯಾಗತರಾಗಿ ಭಾಗವಹಿಸಿದ್ದ ಖ್ಯಾತ ವಾಗ್ಮಿ ಎನ್ . ಆರ್ ದಾಮೋದರ ಶರ್ಮ ಅವರು ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಕುರಿತಾಗಿ ಮಾಹಿತಿ ನೀಡಿದರು.
ನಾವೆಲ್ಲರೂ ಮೊದಲಾಗಿ ಭಾರತೀಯ ಪರಂಪರೆಯನ್ನು ನಮ್ಮಲ್ಲಿ ಮೈಗೂಡಿಸಿಕೊಳ್ಳಬೇಕು, ಬದುಕಿನಲ್ಲಿ ಆತ್ಮ ವಿಶ್ವಾಸದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು, ನಮ್ಮ ಬದುಕು ಎಂಬುವುದು ನಮ್ಮ ಪರಂಪರೆ. ಭಾರತದಲ್ಲಿ ಹುಟ್ಟಿರುವ ಸಾರ್ಥಕತೆಯ ಮನೋಭಾವನೆ ನಮ್ಮಲ್ಲಿರಬೇಕು ಎಂದರು.
ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ , ಸಂಚಾಲಕರಾದ ವಸಂತ ಮಾಧವ , ಪ್ರಾಚಾರ್ಯರಾದ ವಸಂತ ಬಲ್ಲಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಶ್ವೇತ ಕಾರ್ಯಕ್ರಮ ನಿರ್ವಹಿಸಿದರು.
