ಬಂಟ್ವಾಳ:ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಅವಹೇಳನ,ಅಪಪ್ರಚಾರ ಖಂಡಿಸಿ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳು ಸೋಮವಾರ ಬಂಟ್ವಾಳ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಹಮ್ಮಿಕೊಂಡ ಧರ್ಮ ಜಾಗೃತಿ ಯಾತ್ರೆಗೆ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಮುಂಭಾಗ ಚಾಲನೆ ನೀಡಲಾಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚಾಲನೆ ನೀಡಿ ಮಾತನಾಡಿ ಬಿಜೆಪಿ, ಪರಿವಾರ ಸಂಘಟನೆಗಳು ಹಾಗೂ ಧರ್ಮಸ್ಥಳ ಕ್ಷೇತ್ರದ ಭಕ್ತರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದಲೂ ಧರ್ಮ ಜಾಗೃತಿ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಬಂಟ್ವಾಳ ಕ್ಷೇತ್ರದಿಂದಲು ನೂರಕ್ಕೂ ಅಧಿಕ ವಾಹನಗಳು ಯಾತ್ರೆಯಲ್ಲಿ ಪಾಲ್ಗೊಂಡಿವೆ. ಶ್ರೀಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಹೆಗ್ಗಡೆಯವರನ್ನು ನಿಂದಿಸುವುದು, ಅವಹೇಳನ,ಅಪಪ್ರಚಾರ ನಡೆಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರಗಿಸಬೇಕು,ಈ ಪ್ರಕರಣದ ಹಿಂದಿರುವ ಷಡ್ಯಂತ್ರವನ್ನು ಎಸ್ ಐ ಟಿ ಬಯಲಿಗೆ ತರಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಅನೆಯಾಲ, ನ್ಯಾಯವಾದಿ ಶ್ರೀಧರ ಶೆಟ್ಟಿ ಪುಳಿಂಚ, ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಬೆಂಗಳೂರಿನ ಉದ್ಯಮಿ ಕುಮಾರ್ ಆಳ್ವ, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,ಮಾಜಿ ತಾ.ಪಂ.ಸದಸ್ಯ ಮಾಧವ ಮಾವೆ,ಶ್ರೀಕಾಂತ್ ಶೆಟ್ಟಿ,ವಜ್ರನಾಭ ಕಲ್ಲಡ್ಕ ಮೊದಲಾದವರಿದ್ದರು.
