ಬಂಟ್ವಾಳ : ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೃಷ್ಣನಗರ-ಫರಂಗಿಪೇಟೆ ಇದರ ವತಿಯಿಂದ ಆಚರಿಸುವ 43ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.

ಬಳಿಕ ಸಾರ್ವಜನಿಕ ಉಪಯೋಗಕ್ಕೆ ಅಂಬ್ಯುಲೆನ್ಸ್ ವಾಹನವನ್ನು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಲೋಕಾರ್ಪಣೆ ಮಾಡಿದರು. ಕುಂದಾಪುರದ ಸಹಾಯಕ ಕಮೀಷನರ್ ರಶ್ಮಿ ಎಸ್ ಆರ್ ಉಪಸ್ಥಿತರಿದ್ದರು.
ಇದೇ ಸಂದರ್ಭ ಭಕ್ತರಿಗೆ ಭತ್ತದ ತೆನೆಯನ್ನು ವಿತರಿಸಲಾಯಿತು. ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ,ಮಾಜಿ ಜಿಪಂ ಸದಸ್ಯ ರವೀಂದ್ರಕಂಬಳಿ ಹಾಗೂ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು,ಸೇವಾಂಜಲಿ ಟ್ರಸ್ಟಿಗಳು ,ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
