ಬಂಟ್ವಾಳ: ಆದಿಯಿಂದ ಬೆಳೆದುಕೊಂಡು ಬಂದಿರುವ ಪಾರಂಪರಿಕ ಕಲೆಗಳನ್ನು ಮುಂದಿನ ದಿನಗಳಿಗೂ ವಿಸ್ತರಿಸುವ ಅವಶ್ಯಕತೆ ಇದ್ದು,ಮೂಲ ಕಲೆಯ ಕೌಶಲ್ಯಗಳನ್ನು ಹೊಂದಿರುವ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳನ್ನು ಗುರುತಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಶಲ ವಸ್ತುಗಳಿಗೆ  ಬೇಡಿಕೆ ಹೆಚ್ಚಿಸುವ ಪ್ರಯತ್ನಗಳಾಗಬೇಕು ಎಂದು ಇಂಟಕ್ ಮಂಗಳೂರು ವಿಭಾಗದ ಮುಖ್ಯಸ್ಥ ಸುಭಾಷ್ ಚಂದ್ರ ಬಸು ಹೇಳಿದ್ದಾರೆ.


ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ವತಿಯಿಂದ ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಸಾಂಪ್ರದಾಯಿಕ ಬುಟ್ಟಿ ತಯಾರಿಕಾ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಮಂಚಿ ಕೊಳ್ನಾಡು ಪ್ರೌಢಶಾಲೆತ ನಿವೃತ್ತ ಮುಖ್ಯ ಶಿಕ್ಷಕ ದೇವಕಿ ಎಚ್ ಮಾತನಾಡಿ, ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳಿಗೆ ಕೌಶಲ್ಯ ಭರಿತ ತರಬೇತಿ ಕಾರ್ಯಕ್ರಮವು ಜೀವನೋಪಾಯಕ್ಕೆ ದಾರಿ ಮಾಡಿಕೊಡುತ್ತದೆ. ಹಸ್ತ ಕೌಶಲ್ಯವನ್ನು ಹೆಚ್ಚಿಸುವ ಇಂತಹ ಕಾರ್ಯಕ್ರಮಗಳು ಪಾರಂಪರಿಕ ವಸ್ತುಗಳನ್ನು ಉಳಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆ ಇಟ್ಟಂತಾಗುತ್ತದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಶಂಕರ ರಾವ್ ಮಂಚಿ, ಮಂಚಿ-ಕೊಳ್ನಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಪ್ರಸಾದ್ ರೈ ತಿರುವಾಜೆ, ಇಂಟಕ್ ಮಂಗಳೂರು ವಿಭಾಗದ ಸಂಯೋಜಕ ರಾಜೇಂದ್ರ ಕೇದಿಗೆ, ಹರೀಶ್ ಕೊಡಿಯಾಲ್ ಬೈಲು, ರೇಷ್ಮಾ ಶೆಟ್ಟಿ, ಶರ್ವಾಣಿ ಭಟ್ ಹಾಗೂ ಶಾಲಾ ಶಿಕ್ಷಕ ವೃಂದ ಭಾಗವಹಿಸಿದ್ದರು. 
ಸಂಪನ್ಮೂಲ ವ್ಯಕ್ತಿಗಳಾದ ಶಂಕರ ಕೊರಗ ಗುತ್ತಕಾಡು ಮತ್ತು ಸುಪ್ರಿಯಾ ಅವರಿಂದ ಬುಟ್ಟಿ ಹೆಣೆಯುವ ಪ್ರಾತ್ಯಕ್ಷಿಕೆ ಮೂಲಕ ಪ್ರಾಯೋಗಿಕ ಕಾರ್ಯಗಾರ ನಡೆಯಿತು. ಮಂಚಿ ವಲಯದ ಏಳು ಶಾಲೆಗಳಿಂದ 67 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. 
ಮಂಚಿ-ಕೊಳ್ನಾಡು ಪ್ರೌಢಶಾಲಾ ಇಂಟಕ್ ಹೆರಿಟೇಜ್ ಕ್ಲಬ್ ಸಂಯೋಜಕ ಹಾಗೂ ಚಿತ್ರಕಲಾ ಕಲಾವಿದ ತಾರಾನಾಥ್ ಕೈರಂಗಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಂದಿಸಿದರು.

By Suddi9

Leave a Reply

Your email address will not be published. Required fields are marked *