ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ:ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆ
ಬಂಟ್ವಾಳ: ಇಲ್ಲಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸೋಮವಾರ ದ.ಕ. ಜಿ. ಪಂ. ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇವರು ನಡೆಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಪ್ರಾಥಮಿಕ ವಿಭಾಗದಲ್ಲಿ ಅನ್ವಿಷ 6ನೇ ತರಗತಿ – 30 ಕೆಜಿ, ಸಂವಿಧಾ 7ನೇ ತರಗತಿ – 22 ಕೆಜಿ , ಪ್ರೌಢ ವಿಭಾಗದಲ್ಲಿ ಪ್ರೀತಿ 9ನೇ ತರಗತಿ -40 ಕೆಜಿ, ಗೌತಮ್ 9ನೇ ತರಗತಿ – 35 ಕೆಜಿ, ಮಂಥನ್ ಪೂಜಾರಿ 10ನೇ ತರಗತಿ -78 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ವಿದ್ಯಾರ್ಥಿಗಳಿಗೆ ಹಾಗೂ ಕರಾಟೆ ತರಬೇತಿ ಗುರುಗಳಾದ ಅಶೋಕ ಆಚಾರ್ಯ ಅವರನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು. ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಅಂಚನ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ರಮಾನಂದ, ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಜಯಶ್ರೀ, ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ, ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



