ಕಲ್ಲಡ್ಕ ಶ್ರೀ ರಾಮದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇವರ ಸಹಯೋಗದೊಂದಿಗೆ 14 ಮತ್ತು 17 ರ ವಯೋಮಾನದ ಬಾಲಕ, ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು.

ನಿವೃತ್ತ ಉಪನ್ಯಾಸಕರು, ಪ್ರಗತಿಪರ ಕೃಷಿಕರಾದ ಉದಯ ಬೊಂಡಲ ಅವರು ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿ ಅಷ್ಟಾಂಗ ಯೋಗ ಹಾಗೂ ಧ್ಯಾನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಮಾತನಾಡಿ ಯೋಗದಿಂದ ಮನಸ್ಸನ್ನು ಕೇಂದ್ರೀಕರಿಸಿ, ಜ್ಞಾನ ವನ್ನು ಹೆಚ್ಚಿಸಬಹುದು ಎಂದು ತಿಳಿಸಿದರು.
ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರೀವಿಕ್ಷಕರಾದ ಆಶಾ ನಾಯಕ್ ,ತಾಲೂಕು ದೈಹಿಕ ಶಿಕ್ಷಣ ಕಾರ್ಯದರ್ಶಿ ಜನಾರ್ಧನ ,ಕಲ್ಲಡ್ಕ ವಲಯದ ನೋಡಲ್ ಅಧಿಕಾರಿ ಜಗದೀಶ್ , ಕಲ್ಲಡ್ಕ ವಲಯದ ಸಹ ನೋಡಲ್ ಅಧಿಕಾರಿ
ಪ್ರಕಾಶ್ , ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ 2 ಸಂಘದ ಅಧ್ಯಕ್ಷರಾದ ಇಂದುಶೇಖರ್,ತಾಲೂಕು ದೈಹಿಕ ಶಿಕ್ಷಣದ ಅಧ್ಯಕ್ಷರಾದ ಶಿವಪ್ರಸಾದ್, ಶ್ರೀ ರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಶ್ರೀಮಾನ್, ಶ್ರೀ ರಾಮ ವಿದ್ಯಾ ಕೇಂದ್ರದ ಕಾರ್ಯನಿರ್ವಹಣಾಧಿಕಾರಿಯಾದ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ, ಶ್ರೀರಾಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಗೋಪಾಲ್ ಶ್ರೀಮಾನ್ ಉಪಸ್ಥಿತರಿದ್ದರು.
ಜಿನ್ನಪ್ಪ ಶ್ರೀಮಾನ್ ಕಾರ್ಯಕ್ರಮ ನಿರೂಪಿಸಿದರು.



