ಬಂಟ್ವಾಳ: ಆರೋಗ್ಯದ ಬಗ್ಗೆ ಉದಾಸೀನ ತೋರದೆ,40 ವರ್ಷದ ದಾಟಿದ ಪ್ರತಿಯೋರ್ವರು ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು,ಈ ನಿಟ್ಟಿನಲ್ಲಿ ನಗರ ಪ್ರದೇಶದ ಜನರು ಆರೋಗ್ಯ ಸಂಜೀವಿನಿಯಾಗಿರುವ “ನಮ್ಮ ಕ್ಲಿನಿಕ್ ” ಸೇವೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ವಿನಲ್ಲಿ ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ ” ನಮ್ಮ ಕ್ಲಿನಿಕ್ ” ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಸರಕಾರದ 15 ನೇ ಹಣಕಾಸಿನ ಪಿಎಂಎಚ್ ಐಎಂ ಯೋಜನೆಯಡಿ ಕ್ಲಿನಿಕ್ ಮಂಜೂರುಗೊಂಡಿದ್ದು, ಪುರಸಭಾ ಸದಸ್ಯರು ಅವರ ವಾರ್ಡ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಪ್ರಾಥಮಿಕ ಹಂತದಲ್ಲಿ ರೋಗದ ಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಕ್ಲಿನಿಕ್ ಮುಖಾಂತರ ನೆರವಾಗಬೇಕು ಎಂದು ತಿಳಿಸಿದರು.

ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ ಸಭಾಧ್ಯಕ್ಷತೆ ವಹಿಸಿದ್ದರು.ಪುರಸಭಾ ಸದಸ್ಯರಾದ ಪುರುಷೋತ್ತಮ, ಮೀನಾಕ್ಷಿ ಗೌಡ, ಬಂಟ್ವಾಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಮಂಗಳೂರು ಆರ್.ಸಿ.ಎಚ್ ಅಧಿಕಾರಿ ಡಾ.ರಾಜೇಶ್, ಕೈಕಂಬ ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಶ್ವಿನಿ, ತಾಲೂಕು ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ಅಶೋಕ್ ರೈ, ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿ ಆಯಿಶತ್, ಕಟ್ಟಡದ ಮಾಲಕ ಜನಾರ್ದನ ಉಪಸ್ಥಿತರಿದ್ದರು.
