ಬಂಟ್ವಾಳ;ಪ್ರಸಕ್ತ ಸಮಾಜದಲ್ಲಿ ಹೃದಯಾಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಯುವಜನತೆ ಸಹಿತ ಎಲ್ಲರೂ ಮುನ್ನೆಚ್ಚರಿಕೆ ಬಗ್ಗೆ ಜಾಗೃತಿ ಮೂಡಿಸಿಕೊಳ್ಳುವುದರ ಜೊತೆಗೆ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಅರಿತುಕೊಳ್ಳುವ ಅವಶ್ಯಕತೆ ಇದೆ ಎಂದು ಎ.ಜೆ. ಆಸ್ಪತ್ರೆ ತುರ್ತು ವಿಭಾಗ ತಂತ್ರಜ್ಞೆ ಫ್ಯುಝೈಲ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಸಮೀಪದ ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಶುಕ್ರವಾರ ನಡೆದ ‘ಮೌಲಿಕ ಜೀವ ಸಹಾಯ’ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಲಬ್ಬಿನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಮಾಜಿ ಅಧ್ಯಕ್ಷೆ ಶ್ರುತಿ ಮಾಡ್ತಾ, ಅಮ್ಡಾಡಿ ಗ್ರಾ.ಪಂ.ಸದಸ್ಯ ಫೆಲಿಕ್ಸ್ ಡಿಸೋಜ, ಕಾರ್ಯಕ್ರಮ ಸಂಘಟಕ ಕಾರ್ತಿ‌ಕ್‌ ಮತ್ತಿತರರು ಇದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಪ್ರಕಾಶ್ಚಂದ್ರ ಶಿಶಿಲ ಸ್ವಾಗತಿಸಿ, ವಂದಿಸಿದರು

By suddi9

Leave a Reply

Your email address will not be published. Required fields are marked *