ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-25 ನೇ ಸಾಲಿನಲ್ಲಿ ಒಟ್ಟು 545 ಕೋಟಿ ರೂ. ವ್ಯವಹಾರ ನಡೆಸಿ1.93 ಕೋಟಿ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.

ಶನಿವಾರ ಸಿದ್ದಕಟ್ಟೆಯಲ್ಲಿರುವ ಸಂಘದ ಕೇಂದ್ರಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಪ್ರಸಕ್ತ ಸಾಲಿನಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು 122.33 ಕೋ.ರೂ. ಸಾಲ ವಿತರಿಸಲಾಗಿದ್ದು,112.32 ಕೋ.ರೂ.ಸಾಲ ಹೊರಬಾಕಿ ಇರುತ್ತದೆ. ಶೇ 97% ರಷ್ಟು ಸಾಲ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿದೆ ಎಂದರು.
ಸಂಘವು 2024-25 ನೇ ಸಾಲಿನ ವರ್ಷಾಂತ್ಯಕ್ಕೆ 62.19 ಕೋ.ರೂ. ಠೇವಣಿ ಹೊಂದಿದ್ದು , ಅಡಿಟ್ ವರದಿಯಲ್ಲಿಯು “ಎ” ಗ್ರೇಡ್ ನ್ನು ಹಲವು ವರ್ಷಗಳಿಂದ ನಿರಂತರವಾಗಿ ಕಾಯ್ದುಕೊಂಡು ಬಂದಿದೆ ಎಂದ ಅವರು1947 ರಲ್ಲಿ ಸಹಕಾರಿ ಬಂಧುಗಳ ಸಹಕಾತದಲ್ಲಿ ಬಿ. ಕೃಷ್ಣ ರೈ ರವರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾದ ಸಂಘವು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟು 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ.ನಾಲ್ಕು ಶಾಖೆಯನ್ನು ಹೊಂದಿದೆ ಎಂದರು.
ಜಿಲ್ಲೆಯಲ್ಲೆ ಮುಂಚೂಣಿ:2024-25 ನೇ ಸಾಲಿನಲ್ಲಿ 1771 ರೈತರು 2037 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ 52.74 ಲಕ್ಷ ರೂ. ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 5 ರಿಂದ 6 ಕೋಟಿ ಬೆಳೆವಿಮೆ ಪರಿಹಾರ ಪಡೆದಿದ್ದು, ಸಂಘವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ ಎಂದರು.
ರೈತ ಕಲ್ಯಾಣ ನಿಧಿ” ಯೋಜನೆ:
ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ,ಅವರ ಕುಟುಂಬಕ್ಕೆ ‘ರೈತ ಕಲ್ಯಾಣ ನಿಧಿ” ಯೋಜನೆಯ ಮೂಲಕ ತಲಾ 10 ಸಾ.ರೂ.ವಿನಂತೆ 24 ಮಂದಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.
ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದ್ದು,
ರಾಸಾಯನಿಕ ಗೊಬ್ಬರ ,ಸಾವಯವ ಗೊಬ್ಬರ,ಮೈಲುತ್ತುತ್ತು , ಸುಣ್ಣ, ಸೇರಿದಂತೆ ರೈತರಿಗೆ ಬೇಕಾಗುವ ಉತ್ತಮ ಗುಣಮಟ್ಟದ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆಯಲ್ಲದೆರಿಯಾಯಿತಿ ದರದಲ್ಲಿ ಮೈಲುತ್ತುತ್ತು, ಸುಣ್ಣ, ಕಡಿಮೆ ಬಡ್ಡಿದರದಲ್ಲಿ ರಾಸಾಯನಿಕ ಗೊಬ್ಬರ,ಖರೀದಿಗೆ ಸಾಲವನ್ನು ನಿಡಲಾಗುತ್ತಿದೆ ಎಂದುಪ್ರಭಾಕರ ಪ್ರಭು ವಿವರಿಸಿದರು.
ಸಾರ್ವಜನಿಕ ಕಾರ್ಯಕ್ರಮಕ್ಕೆ ಅನೂಕೂಲವಾಗುವಂತೆ ಸಂಘದ ಸ್ಥಾಪಕಾಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ನೆನಪಿಗಾಗಿ ಅವರ ಹೆಸರಿನಲ್ಲಿರುವ ರೈತ ಸಭಾಂಗಣವನ್ನು ಸಾರ್ವಜನಿಕರ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದರು.
ಸಂಘದ 2024-25 ನೇ ಸಾಲಿನ ಮಹಾಸಬೆಯು ಸೆ.20 ರಂದು ಬೆ. 10.30 ಕ್ಕೆ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ದಿನೇಶ್ ಪೂಜಾರಿ , ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ,ಎ ಶಿವ ಗೌಡ , ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೆ , ನವೀನ್ ಹೆಗ್ಡೆ , ಸಿಇಒ ಆರತಿ ಶೆಟ್ಟಿ , ಸಹಾಯಕ ಸಿಇಒ ಮಲ್ಲಿಕಾ ಉಪಸ್ಥಿತರಿದ್ದರು
