ಬಣ್ಣದ ವೇಷದಾರಿ ದಿ.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಸಂಸ್ಮರಣೆ,ಪ್ರಶಸ್ತಿ ಪ್ರದಾನ
ಬಂಟ್ವಾಳ:ಸದಾಶಿವ ಶೆಟ್ಟಿಗಾರ್ ಅವರು ಯಕ್ಷಗಾನ ಕ್ಷೇತ್ರದಲ್ಲಿ ಮರೆಯಲಾಗದ ಮಹಾನ್ ದೈತ್ಯಪ್ರತಿಭೆ. ಬಣ್ಣದ ಮಾಲಿಂಗರ ಗರಡಿಯಲ್ಲಿ ಪಳಗಿದ ಅವರ ಬಣ್ಣಗಾರಿಕೆ, ಸ್ಪಷ್ಟ ಮಾತುಗಳಿಂದ ತನ್ನದೇ ಛಾಪನ್ನುಮೂಡಿಸಿದ್ದರು. ಮುಂದಿನ ಜನಾಂಗ ಅವರ ಪರಂಪರೆಯನ್ನು ಉಳಿಸಬೇಕಾಗಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಅವರು ಹೇಳಿದರು.

ಸಿದ್ದಕಟ್ಟೆ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ ಇದರ 8 ನೇ ವಾರ್ಷಿಕೋತ್ಸವ ಪ್ರಯುಕ್ತ ಸಿದ್ದಕಟ್ಟೆ ಫಲ್ಗುಣಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಬಣ್ಣದ ವೇಷದಾರಿ ದಿ.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ತಾಳಮದ್ದಳೆ ಕಾರ್ಯಕ್ರಮದಲ್ಲಿ ಸಂಸ್ಮರಣೆ ನಡೆಸಿ ಮಾತನಾಡಿದರು.
ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ ಕಾರ್ಯಕ್ರಮ ಉದ್ಘಾಟಿಸಿದರು. ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ ಅಧ್ಯಕ್ಷತೆ ವಹಿಸಿದ್ದರು.
ಸಂದರ್ಭದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಸ್ರಣ್ಣ,
ರೋಟರೀ ಕ್ಲಬ್ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ಸಿದ್ದಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಸಮಿತಿ ಪದಾಧಿಕಾರಿಗಳಾದ ಉಮೇಶ್ ಹಿಂಗಾಣಿ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಸಚ್ಚಿದಾನಂದ ಭಟ್, ಡಾ.ಯೋಗೀಶ್ ಕೈರೋಡಿ ಮತ್ತಿತರರು ಉಪಸ್ಥಿತರಿದ್ದರು.
ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಅವರು ಸ್ವಾಗತಿಸಿದರು. ಗಣೇಶ್ ಶೆಟ್ಟಿ ವಂದಿಸಿದರು.
ಉಮೇಶ್ ಪಾಳ್ಯ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳೆ ನಡೆಯಿತು