ಕೈಕಂಬ : ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘ(ನಿ) ಇದರ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. ೨೩ರಂದು ಬೆಳಿಗ್ಗೆ ೧೧ ಗಂಟೆಗೆ ಸಂಘದ ಅಧ್ಯಕ್ಷ ಓಂಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಗುರುಪುರದ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ ನಡೆಯಲಿದೆ.

ಕೃಷಿ ಮಾಹಿತಿ ಕಾರ್ಯಗಾರ :

ಮಧ್ಯಾಹ್ನ ೨ ಗಂಟೆಗೆ ಸಮುದಾಯ ಭವನದಲ್ಲಿ ಕೃಷಿ ಮಾಹಿತಿ ಮತ್ತು ಸರ್ಕಾರದಿಂದ ಕೃಷಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಗಾರ ನಡೆಯಲಿದೆ.

ಸಂಘದ ಅಧ್ಯಕ್ಷ ಓಂಪ್ರಕಾಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಾ. ಭರತ್ ಶೆಟ್ಟಿ ಅವರು ದೀಪ ಬೆಳಿಗಿಸಿ ಕಾರ್ಯಗಾರಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಕೆಎಂಎಫ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಸಹಕಾರ ಸಂಘಗಳ ನಿಬಂಧಕಿ ತ್ರೀವೇಣಿ ರಾವ್ ಕೆ, ಸಂಘದ ಉಪಾಧ್ಯಕ್ಷ ಜಿ. ಎಂ. ಉದಯ ಭಟ್ ಹಾಗೂ ಕುಡುಪು ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಬಿ., ಉಪಸ್ಥಿತಲಿರುವರು.

ಮಂಗಳೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ಕೆ. ಆರ್, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ(ಸಸ್ಯ ಸಂರಕ್ಷಣೆ) ಡಾ. ಕೇದಾರನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ. ಪ್ರವೀಣ್ ಮತ್ತು ಬಜ್ಪೆ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ. ಅಶೋಕ್ ಕೆ. ಆರ್ ಅವರು ಕೃಷಿ ಮಾಹಿತಿ ನೀಡಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *